SC- ST ಮೀಸಲಾತಿ ತೀರ್ಪು ವಿರೋಧಿಸಿ ನಾಳೆ ಭಾರತ್ ಬಂದ್: ಏನಿರುತ್ತೆ? ಏನಿರಲ್ಲ, ಇಲ್ಲಿದೆ ಸಂಪೂರ್ಣ ಮಾಹಿತಿ

ಆಗಸ್ಟ್ 1 ರಂದು ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಎಸ್‌ಸಿ/ಎಸ್‌ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟಿಸಲು ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಆಗಸ್ಟ್ 21 ರಂದು ರಾಷ್ಟ್ರವ್ಯಾಪಿ ಬಂದ್‌ಗೆ ಕರೆ ನೀಡಿದೆ.

ಆಗಸ್ಟ್ 1 ರಂದು ಸರ್ವೋಚ್ಚ ನ್ಯಾಯಾಲಯವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು) ಮತ್ತು ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ. ಆದರೆ ಸರ್ವೋಚ್ಛ ನ್ಯಾಯಾಲಯದ ಈ ತೀರ್ಪನ್ನು ವಿರೋಧಿಸಿ ಮತ್ತು ನ್ಯಾಯಾಲಯದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಭಾರತ್ ಬಂದ್ ನಡೆಸಲಾಗುತ್ತಿದೆ. ರಾಜಸ್ಥಾನದ ಎಸ್‌ಸಿ/ಎಸ್‌ಟಿ ಗುಂಪುಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಅಂದ ಹಾಗೆ ಕರ್ನಾಟಕದಲ್ಲಿ ಈ ಬಂದ್ ಪರಿಣಾಮ ಬೀರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಭಾರತ್ ಬಂದ್ ವೇಳೆ ಹಿಂಸಾಚಾರವನ್ನು ತಪ್ಪಿಸಲು ಬಂದ್‌ಗೆ ಸಿದ್ಧತೆಯನ್ನು ಪರಿಶೀಲಿಸಲು ಹಿರಿಯ ನಾಗರಿಕ ಮತ್ತು ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಎಲ್ಲ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದು, ಬಂದ್‌ಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಉತ್ತಮ ಸಹಕಾರಕ್ಕೆ ಅನುಕೂಲವಾಗುವಂತೆ ಬಂದ್‌ಗೆ ಕರೆ ನೀಡುವ ಗುಂಪುಗಳೊಂದಿಗೆ ಮತ್ತು ಮಾರುಕಟ್ಟೆ ಸಂಘಗಳೊಂದಿಗೆ ಸಭೆಗಳನ್ನು ಆಯೋಜಿಸಲು ನಾವು ನಮ್ಮ ಅಧಿಕಾರಿಗಳನ್ನು ಕೇಳಿದ್ದೇವೆ ”ಎಂದು ಡಿಜಿಪಿ ಹೇಳಿರುವುದಾಗಿ ಆಂಗ್ಲ ಪತ್ರಿಕೆ ವರದಿ ಮಾಡಿದೆ.

ಸಾಂದರ್ಭಿಕ ಚಿತ್ರ
ಸರ್ನಾ ಧರ್ಮಕ್ಕೆ ಮಾನ್ಯತೆ ನೀಡುವಂತೆ ಒತ್ತಾಯಿಸಿ ಡಿ.30 ರಂದು ಭಾರತ್ ಬಂದ್ ಗೆ ಕರೆ

ಸುಪ್ರೀಂಕೋರ್ಟ್‌ನ ತೀರ್ಪು ಎಸ್‌ಸಿ ಮತ್ತು ಎಸ್‌ಟಿ ಗುಂಪುಗಳೊಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದು, ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಹೇಳಿದೆ. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮೀಸಲಾತಿ ಕುರಿತ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂಪಡೆಯುವಂತೆ ಒತ್ತಾಯಿಸುವುದು ಭಾರತ್ ಬಂದ್‌ನ ಮುಖ್ಯ ಉದ್ದೇಶವಾಗಿದೆ ಎಂದು ವರದಿಗಳು ತಿಳಿಸಿವೆ.

ತುರ್ತು, ಆಂಬ್ಯುಲೆನ್ಸ್ ಸೇವೆಗಳು, ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೇವೆಗಳು, ಪೊಲೀಸ್ ಸೇವೆಗಳು ಸಕ್ರಿಯವಾಗಿರಲಿವೆ. ಅಗತ್ಯ ಔಷಧಿಗಳನ್ನು ಒದಗಿಸಲು ಫಾರ್ಮಸಿಗಳು ಸಹ ತೆರೆದಿರುತ್ತವೆ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಶಾಲಾ-ಕಾಲೇಜುಗಳು ಎಂದಿನಂತೆ ಇರುತ್ತವೆ ಎಂದು ವರದಿಗಳು ತಿಳಿಸಿವೆ. ಬಂದ್ ವೇಳೆ ಹಿಂಸಾಚಾರದ ಸಾಧ್ಯತೆಯ ಹಿನ್ನೆಲೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಸಿದ್ಧತೆಗಾಗಿ ಸಭೆ ನಡೆಸಿದ್ದಾರೆ. ಎಲ್ಲಾ ವಿಭಾಗೀಯ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ತಿಳಿಸಿವೆ.

ಪಶ್ಚಿಮ ಉತ್ತರ ಪ್ರದೇಶವನ್ನು ವಿಶೇಷವಾಗಿ ಸೂಕ್ಷ್ಮವೆಂದು ಪರಿಗಣಿಸಲಾಗಿದೆ. ಈ ಕಾರಣದಿಂದಾಗಿ ಇಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ವ್ಯಾಪಕ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅಂತಹ ದಿನಗಳಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಖಾಸಗಿ ಕಚೇರಿಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವುದಿಲ್ಲ, ಆಂಬ್ಯುಲೆನ್ಸ್‌ಗಳಂತಹ ತುರ್ತು ಸೇವೆಗಳು ಕಾರ್ಯನಿರ್ವಹಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com