
ನವದೆಹಲಿ: ಬಿಜೆಪಿ ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಮಂಗಳವಾರ ಉಸ್ತುವಾರಿಯನ್ನಾಗಿ ನೇಮಿಸಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಮತ್ತು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
"ಈ ನೇಮಕಾತಿ ತಕ್ಷಣವೇ ಜಾರಿಗೆ ಬರುತ್ತದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement