ಯಾವುದೇ ಬೆಲೆ ತೆತ್ತಾದರೂ ಬಿಜೆಪಿಯ ಪಿತೂರಿ ವಿಫಲಗೊಳಿಸುತ್ತೇವೆ: ರಾಹುಲ್ ಗಾಂಧಿ

ಕೇಂದ್ರದ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷೆ ಪ್ರೀತಿ ಸೂದನ್‌ ಅವರಿಗೆ ಬರೆದ ಪತ್ರದಲ್ಲಿ ಲ್ಯಾಟರಲ್ ಎಂಟ್ರಿ ಸಂಬಂಧಿತ ಇತ್ತೀಚಿನ ಜಾಹೀರಾತನ್ನು ರದ್ದು ಮಾಡುವಂತೆ ನಿರ್ದೇಶನ ನೀಡಿದ್ದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಖಾಸಗಿಯವರಿಗೆ ಅವಕಾಶ ಮಾಡಿಕೊಡಲು 'ಲ್ಯಾಟರಲ್ ಎಂಟ್ರಿ'ಯ ಜಾಹೀರಾತನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯನ್ನು ರಕ್ಷಣೆ ಮಾಡುತ್ತೇವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುಡುಗಿದ್ದಾರೆ.

ಕೇಂದ್ರದ ಸಿಬ್ಬಂದಿ ಸಚಿವಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷೆ ಪ್ರೀತಿ ಸೂದನ್‌ ಅವರಿಗೆ ಬರೆದ ಪತ್ರದಲ್ಲಿ ಲ್ಯಾಟರಲ್ ಎಂಟ್ರಿ ಸಂಬಂಧಿತ ಇತ್ತೀಚಿನ ಜಾಹೀರಾತನ್ನು ರದ್ದು ಮಾಡುವಂತೆ ನಿರ್ದೇಶನ ನೀಡಿದ್ದರು. ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ ನಾವು ಯಾವುದೇ ಬೆಲೆ ತೆತ್ತಾದರೂ ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯ ರಕ್ಷಣೆ ಮಾಡುತ್ತೇವೆ. ಲ್ಯಾಟರಲ್ ಎಂಟ್ರಿಯಂತಹ ಬಿಜೆಪಿಯ ಸಂಚನ್ನು ವಿಫಲಗೊಳಿಸುತ್ತೇವೆ ಎಂದು ರಾಹುಲ್ ಹೇಳಿದ್ದಾರೆ.

ಶೇ 50ರ ಮೀಸಲಾತಿ ಮಿತಿಯನ್ನು ತೆರವುಗೊಳಿಸುವ ಮೂಲಕ ನಾವು ಜಾತಿ ಜನಗಣತಿಯ ಆಧಾರದ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಲಿದ್ದೇವೆ ಎಂದು ರಾಹುಲ್ ಪುನರುಚ್ಚರಿಸಿದ್ದಾರೆ ಆದರೆ ಸರ್ಕಾರದ ಉನ್ನತ ಹುದ್ದೆಗಳಿಗೆ 'ಲ್ಯಾಟರಲ್ ಎಂಟ್ರಿ' ಮೂಲಕ ಖಾಸಗಿ ವಲಯದ ತಜ್ಞರು ಹಾಗೂ ಪರಿಣತರನ್ನು ನೇಮಕ ಮಾಡಿಕೊಳ್ಳುವುದಕ್ಕೆ ಕಾಂಗ್ರೆಸ್ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಅಲ್ಲದೆ 'ಲ್ಯಾಟರಲ್ ಎಂಟ್ರಿ' ಕ್ರಮವು ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಕಸಿದುಕೊಳ್ಳುವ ನಡೆ ಎಂದು ಆರೋಪಿಸಿದ್ದವು.

ರಾಹುಲ್ ಗಾಂಧಿ
'ಲ್ಯಾಟರಲ್ ಎಂಟ್ರಿ': ಜಾಹೀರಾತು ಹಿಂತೆಗೆದುಕೊಳ್ಳುವಂತೆ UPSC ಗೆ ಕೇಂದ್ರ ಸರ್ಕಾರ ಸೂಚನೆ

ಆಗಸ್ಟ್ 17 ರಂದು, UPSC 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳನ್ನು ಲ್ಯಾಟರಲ್ ಎಂಟ್ರಿ ಮೂಲಕ ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿತು, ಇದನ್ನು ಸರ್ಕಾರಿ ಇಲಾಖೆಗಳಲ್ಲಿ ತಜ್ಞರ (ಖಾಸಗಿ ವಲಯದವರನ್ನು ಒಳಗೊಂಡಂತೆ) ನೇಮಕಾತಿ ಎಂದು ಉಲ್ಲೇಖಿಸಲಾಗುತ್ತದೆ. ಈ ನಿರ್ಧಾರವು ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳ ಮೀಸಲಾತಿ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com