
ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಕೇಂದ್ರ ಸರ್ಕಾರ ಬುಧವಾರ ಅತ್ಯುನ್ನತ ವರ್ಗದ ಸಶಸ್ತ್ರ ವಿಐಪಿ ಭದ್ರತೆ ಝಡ್ ಪ್ಲಸ್ ಭದ್ರತೆ ಒದಗಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೇಂದ್ರ ಗೃಹ ಸಚಿವಾಲಯವು 83 ವರ್ಷದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿಗೆ ಝಡ್ ಪ್ಲಸ್ ಭದ್ರತೆ ಒದಗಿಸುವಂತೆ ಕೇಂದ್ರ ಮೀಸಲು ಪೊಲೀಸ್ ಪಡೆಗೆ ಸೂಚಿಸಿದೆ.
ಶರದ್ ಪವಾರ್ ಅವರ ಭದ್ರತೆಗಾಗಿ 55 ಶಸ್ತ್ರಸಜ್ಜಿತ ಸಿಆರ್‌ಪಿಎಫ್ ಸಿಬ್ಬಂದಿಯ ತಂಡವನ್ನು ನಿಯೋಜಿಸಲಾಗಿದೆ.
ಕೇಂದ್ರ ಗುಪ್ತಚರ ಸಂಸ್ಥೆಗಳು, ಶರದ್ ಪವಾರ್ ಅವರಿಗೆ ಕೆಲವು ಸಮಾಜ ಘಾತುಕ ಶಕ್ತಿಗಳಿಂದ ಅಪಾಯವಿದೆ ಎಂಬ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರಿಗೆ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶರದ್ ಪವಾರ್ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲು ಸಿಆರ್‌ಪಿಎಫ್ ತಂಡ ಈಗಾಗಲೇ ಮಹಾರಾಷ್ಟ್ರದಲ್ಲಿದೆ ಎಂದು ಅವರು ಹೇಳಿದ್ದಾರೆ.
Advertisement