ತಮಿಳು ನಾಡು ರಾಜಕೀಯ ಅಖಾಡಕ್ಕೆ ನಟ ದಳಪತಿ ವಿಜಯ್ ಅಧಿಕೃತ ಎಂಟ್ರಿ: ಪಕ್ಷದ ಧ್ವಜ, ಚಿಹ್ನೆ ಬಿಡುಗಡೆ

ಚೆನ್ನೈಯ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ನಡೆದ ಪಕ್ಷದ ಬಾವುಟ ಮತ್ತು ಚಿಹ್ನೆ ಬಿಡುಗಡೆ ಕಾರ್ಯಕ್ರಮದ ವೇಳೆ ವಿಜಯ್ ಅವರ ತಂದೆ ಮತ್ತು ತಾಯಿ ಉಪಸ್ಥಿತರಿದ್ದರು.
ಚೆನ್ನೈಯಲ್ಲಿ ಪಕ್ಷದ ಬಾವುಟ ಮತ್ತು ಚಿಹ್ನೆ ಬಿಡುಗಡೆ ಮಾಡಿದ ನಟ ವಿಜಯ್ ದಳಪತಿ
ಚೆನ್ನೈಯಲ್ಲಿ ಪಕ್ಷದ ಬಾವುಟ ಮತ್ತು ಚಿಹ್ನೆ ಬಿಡುಗಡೆ ಮಾಡಿದ ನಟ ವಿಜಯ್ ದಳಪತಿ
Updated on

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ(Tamilaga Vettri Kazhagam)ನ ಬಾವುಟ ಹಾಗೂ ಚಿಹ್ನೆಯನ್ನು ಗುರುವಾರ ಅನಾವರಣಗೊಳಿಸಿದರು.

ಚೆನ್ನೈಯ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ನಡೆದ ಪಕ್ಷದ ಬಾವುಟ ಮತ್ತು ಚಿಹ್ನೆ ಬಿಡುಗಡೆ ಕಾರ್ಯಕ್ರಮದ ವೇಳೆ ವಿಜಯ್ ಅವರ ತಂದೆ ಮತ್ತು ತಾಯಿ ಉಪಸ್ಥಿತರಿದ್ದರು.

ತಮ್ಮ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸುವ ಸಂದರ್ಭದಲ್ಲಿ, ನಟ ವಿಜಯ್ ಅವರು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಪ್ರತಿಜ್ಞೆ ಮಾಡಿದರು.

“ನಮ್ಮ ದೇಶದ ವಿಮೋಚನೆಗಾಗಿ ಹೋರಾಡಿದ ಮತ್ತು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಹೋರಾಟಗಾರರನ್ನು ಮತ್ತು ತಮಿಳು ನೆಲದಿಂದ ನಮ್ಮ ಜನರ ಹಕ್ಕುಗಳಿಗಾಗಿ ಅವಿರತವಾಗಿ ಹೋರಾಡಿದ ಅಸಂಖ್ಯಾತ ಸೈನಿಕರನ್ನು ನಾವು ಯಾವಾಗಲೂ ಶ್ಲಾಘಿಸುತ್ತೇವೆ. ನಾನು ಜಾತಿ, ಧರ್ಮ, ಲಿಂಗ, ಹುಟ್ಟಿದ ಸ್ಥಳದ ಹೆಸರಿನಲ್ಲಿ ಸಮಾಜದಲ್ಲಿ ಮಾಡುವ ವ್ಯತ್ಯಾಸಗಳನ್ನು ತೆಗೆದುಹಾಕುತ್ತೇನೆ. ಜನರಲ್ಲಿ ಜಾಗೃತಿ ಮೂಡಿಸಿ ಮತ್ತು ಎಲ್ಲರಿಗೂ ಸಮಾನ ಅವಕಾಶಗಳು ಮತ್ತು ಸಮಾನ ಹಕ್ಕುಗಳಿಗಾಗಿ ಶ್ರಮಿಸುತ್ತೇನೆ. ನಾನು ಎಲ್ಲಾ ಜೀವಿಗಳಿಗೆ ಸಮಾನತೆಯ ತತ್ವವನ್ನು ಎತ್ತಿಹಿಡಿಯುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ ಎಂದು ಪ್ರತಿಜ್ಞಾ ವಿಧಿ ಓದಿದರು.

ಈ ವರ್ಷದ ಫೆಬ್ರವರಿಯಲ್ಲಿ, ವಿಜಯ್ ಅವರು ತಮಿಳಗ ವೆಟ್ರಿ ಕಳಗಂ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿ 2026 ರ ತಮಿಳು ನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.

ಅವರ ಪಕ್ಷವು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸಿರಲಿಲ್ಲ. ಡಿಎಂಕೆ ನೇತೃತ್ವದ ಮೈತ್ರಿಯು ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆಯನ್ನು ಗೆದ್ದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com