ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮಾಜಿ ಪ್ರಾಂಶುಪಾಲ, ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ಕೋರಿದ ಸಿಬಿಐ

ಘಟನೆ ನಡೆದ ದಿನದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ದು, ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ನಡೆಸಲು ಸಿಬಿಐ ಅನುಮತಿ ಕೋರಿದೆ.
ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
Updated on

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಗೆ ಅನುಮತಿ ನೀಡುವಂತೆ ಸಿಬಿಐ ಗುರುವಾರ ವಿಶೇಷ ಕೋರ್ಟ್ ಮನವಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ನಡೆದ ದಿನದಂದು ಕರ್ತವ್ಯದಲ್ಲಿದ್ದ ಘೋಷ್ ಮತ್ತು ಇತರ ನಾಲ್ವರು ವೈದ್ಯರನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ದು, ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ನಡೆಸಲು ಸಿಬಿಐ ಅನುಮತಿ ಕೋರಿದೆ ಎಂದು ಅವರು ಹೇಳಿದ್ದಾರೆ.

ನ್ಯಾಯಾಲಯದ ಅನುಮತಿ ಮತ್ತು ಆರೋಪಿಯ ಒಪ್ಪಿಗೆಯ ನಂತರವೇ ಸುಳ್ಳು ಪತ್ತೆ ಪರೀಕ್ಷೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: FIR ದಾಖಲು ವಿಳಂಬ, ಮರಣೋತ್ತರ ಪರೀಕ್ಷೆ ವಿಧಾನ ಬಗ್ಗೆ ಸುಪ್ರೀಂ ಕೋರ್ಟ್ ಸಂದೇಹ!

ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಈ ಘಟನೆ ಖಂಡಿಸಿ ವೈದ್ಯರು ದೇಶಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಿದರು.

ವೈದ್ಯೆಯ ಸಾವಿನ ಸುದ್ದಿ ತಿಳಿದ ನಂತರ ಘೋಷ್ ಅವರ ನಿರ್ದಿಷ್ಟ ಪಾತ್ರದ ಬಗ್ಗೆ ಸಿಬಿಐ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ಆಕೆಯ ಶವವನ್ನು ನೋಡುವ ಮೊದಲು ಪೋಷಕರನ್ನು ಸುಮಾರು ಮೂರು ಗಂಟೆಗಳ ಕಾಲ ಕಾಯುವಂತೆ ಮಾಡಿದ್ದೇಕೆ ಎಂದು ಸಿಬಿಐ ಪ್ರಶ್ನಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com