ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: FIR ದಾಖಲು ವಿಳಂಬ, ಮರಣೋತ್ತರ ಪರೀಕ್ಷೆ ವಿಧಾನ ಬಗ್ಗೆ ಸುಪ್ರೀಂ ಕೋರ್ಟ್ ಸಂದೇಹ!

ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ನಂತರ ರಾತ್ರಿ 11:45 ಕ್ಕೆ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.
ಸುಪ್ರೀಂ ಕೋರ್ಟ್ ನಲ್ಲಿ ಇಂದು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಚಾರಣೆ
ಸುಪ್ರೀಂ ಕೋರ್ಟ್ ನಲ್ಲಿ ಇಂದು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಚಾರಣೆ
Updated on

ನವದೆಹಲಿ: ದೇಶಾದ್ಯಂತ ಸದ್ದು ಮಾಡಿರುವ, ವೈದ್ಯರ ತೀವ್ರ ಪ್ರತಿಭಟನೆಗೆ ಕಾರಣವಾಗಿರುವ ಕೋಲ್ಕತ್ತಾದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಆರಂಭಿಸಿದ್ದು, ಸಿಬಿಐ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿರುವ ವಿಚಾರಣೆಯ ಸ್ಥಿತಿ ವರದಿಯನ್ನು ಪರಿಶೀಲಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಎಫ್‌ಐಆರ್ ದಾಖಲಿಸುವಲ್ಲಿನ ವಿಳಂಬವಾಗಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಸಿಬಿಐ ವರದಿಯಲ್ಲಿ ಏನು ಹೇಳಿದೆ?: ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ನಂತರ ರಾತ್ರಿ 11:45 ಕ್ಕೆ ಪ್ರಕರಣದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ಈ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯ ಬಗ್ಗೆ ನ್ಯಾಯಾಲಯ ಪ್ರಶ್ನೆ ಮಾಡಿದೆ. ಆರಂಭದಲ್ಲಿ, ರಾಜ್ಯ ಪೊಲೀಸರು ಸಂತ್ರಸ್ತೆಯ ಪೋಷಕರಿಗೆ ಇದು ಆತ್ಮಹತ್ಯೆ ಎಂದು ತಿಳಿಸಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ವರದಿ ಮಾಡಿದೆ. ನಂತರವೇ ಪೊಲೀಸರು ಇದೊಂದು ಕೊಲೆ ಎಂದು ಒಪ್ಪಿಕೊಂಡಿದ್ದಾರೆ. ಸಂತ್ರಸ್ತೆಯ ಸ್ನೇಹಿತನು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾನೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದ್ದು, ನಂತರದ ಬೆಳವಣಿಗೆಯ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ವೀಡಿಯೊಗ್ರಫಿಗೆ ಸಿಬಿಐ ಒತ್ತಾಯಿಸಿದೆ.

ಸುಪ್ರೀಂ ಕೋರ್ಟ್ ನಲ್ಲಿ ಇಂದು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಚಾರಣೆ
ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಕರ್ತವ್ಯಕ್ಕೆ ಮರಳುವಂತೆ ಪ್ರತಿಭಟನಾನಿರತ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೂಚನೆ

ಪೊಲೀಸರು ಹೇಳುವುದೇನು?: ಘಟನೆಯನ್ನು ಮೊದಲು ದಾಖಲಿಸಿದ ಕೋಲ್ಕತ್ತಾ ಪೊಲೀಸ್ ಅಧಿಕಾರಿಗೆ ತಾವು ಪ್ರವೇಶಿಸಿದ ಸಮಯವನ್ನು ವಿವರಿಸಲು ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಕರಣವನ್ನು ಅಧಿಕೃತವಾಗಿ ಅಸಹಜ ಸಾವು ಎಂದು ದಾಖಲಿಸುವ ಮೊದಲು ಸಂತ್ರಸ್ತೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಯಿತು ಎಂದು ಇಲ್ಲಿ ಉಲ್ಲೇಖಿಸಲಾಗಿದೆ, ಈ ಬಗ್ಗೆ ಅಚ್ಚರಿ ವ್ಯಕ್ತಪಡಿಸಿರುವ ನ್ಯಾಯಾಲಯವು ತೀವ್ರ ಗೊಂದಲವುಂಟುಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದೆ.

ಘಟನೆಯ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಸುಪ್ರೀಂ ಕೋರ್ಟ್ ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತು ಕೆಲಸದ ಸ್ಥಳದಲ್ಲಿ ಭದ್ರತೆ ನೀಡುವುದಾಗಿ ಯಾವುದೇ ಶಿಸ್ತುಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಭರವಸೆ ನೀಡಿದೆ.

ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಇಂದು ಆರಂಭಿಸಿತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com