ಛಿಂದ್ವಾರಾ: ಮಧ್ಯಪ್ರದೇಶದ ಛಿಂದ್‌ವಾರಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮನೆಯನ್ನು ಸ್ಥಳೀಯ ಆಡಳಿತ ಧ್ವಂಸ ಮಾಡಿದೆ.
ಆರೋಪಿ ಮೊಹಮ್ಮದ್ ನಫೀಸ್ ಮನೆಯನ್ನು ನೆಲಸಮಗೊಳಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವಧೇಶ್ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಆಗಸ್ಟ್ 11 ರಂದು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಆರೋಪಿ ಸಂತ್ರಸ್ತೆಯ ಆಕ್ಷೇಪಾರ್ಹ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿ, ಬೆದರಿಕೆ ಹಾಕಿದ್ದ. ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ಆತನ ಮನೆ ಇರುವ ಬಗ್ಗೆ ದೂರು ಸ್ವೀಕರಿಸಲಾಗಿತ್ತು ಎಂದು ಚೌರೈ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪ್ರಭಾತ್ ಮಿಶ್ರಾ ಹೇಳಿದ್ದಾರೆ.
1,080 ಚದರ ಅಡಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದ್ದು, ಆರೋಪಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್‌ಗೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಅಕ್ರಮ ಕಟ್ಟಡವನ್ನು ತೆರವುಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
Advertisement