
ದಿಂಡಿಗಲ್: ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ದಿಂಡಿಗಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ನಾಥಂನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರಿಬ್ಬರೂ ಪಟಾಕಿ ಕಾರ್ಖಾನೆಯ ಕೂಲಿಕಾರ್ಮಿಕರು ಎಂದು ಹೇಳಲಾಗಿದ್ದು, ದುರಂತದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ದಿಂಡಿಗಲ್ ಎಸ್ಪಿ ಪ್ರತೀಪ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಫೋಟಕ್ಕೆ ಕಾರಣವೇನು ಎಂಬುದಕ್ಕೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ.. ಆದರೆ ರಕ್ಷಣಾ ಕಾರ್ಯಾಚರಣೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement