
ಕೋಲ್ಕತ್ತಾ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ಪ್ರಕರಣದ ತನಿಖೆಯ ಭಾಗವಾಗಿ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ (ಆರ್‌ಜಿಕೆಎಂಸಿಎಚ್) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ಐವರಿಗೆ ಸಿಬಿಐ ಸೋಮವಾರ ಎರಡನೇ ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಿದೆ.
ಅಧಿಕಾರಿಯೊಬ್ಬರ ಪ್ರಕಾರ, ಕಳೆದ 10 ದಿನಗಳಲ್ಲಿ, ಘೋಷ್ ಅವರು ವಿಚಾರಣೆಯ ಸಮಯದಲ್ಲಿ ಅಸಮಂಜಸವಾದ ಉತ್ತರಗಳನ್ನು ನೀಡಿದ್ದಾರೆ. ಹೀಗಾಗಿ ಅವರನ್ನು ಮತ್ತೊಂದು ಸುತ್ತಿನ ಪಾಲಿಗ್ರಾಫ್ ಪರೀಕ್ಷೆಗೆ ಒಳಪಡಿಸಲಾಗಿದೆ.
ಸಿಬಿಐ ಆರಂಭದಲ್ಲಿ ಕಳೆದ ಶನಿವಾರ ಘೋಷ್ ಮತ್ತು ಇತರ ಐವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಿತ್ತು. ನಂತರ ಬಂಧಿತ ಆರೋಪಿ ಸಂಜಯ್ ರಾಯ್ ನನ್ನು ಭಾನುವಾರ ಪ್ರೆಸಿಡೆನ್ಸಿ ಕರೆಕ್ಷನಲ್ ಹೋಮ್‌ನಲ್ಲಿ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಆಗಸ್ಟ್ 9 ರಂದು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಮರುದಿನ ಅಪರಾಧಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕ ಸಂಜಯ್ ರಾಯ್ ನನ್ನು ಬಂಧಿಸಲಾಯಿತು.
ಈ ಭೀಕರ ಕೃತ್ಯವನ್ನು ಖಂಡಿಸಿ ವೈದ್ಯರು ಮತ್ತು ಸಾರ್ವಜನಿಕರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಿದ್ದರು.
Advertisement