ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಎನ್ ಸಿ ಸೀಟು ಹಂಚಿಕೆ ಅಂತಿಮ

ಒಪ್ಪಂದದ ಪ್ರಕಾರ, 90 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 32 ರಲ್ಲಿ ಸ್ಪರ್ಧಿಸಲಿದ್ದು, ನ್ಯಾಷನಲ್ ಕಾನ್ಫರೆನ್ಸ್ 51 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಕಾಂಗ್ರೆಸ್, ಎನ್ ಸಿ ನಾಯಕರು
ಕಾಂಗ್ರೆಸ್, ಎನ್ ಸಿ ನಾಯಕರು
Updated on

ನವದೆಹಲಿ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಸೀಟು ಹಂಚಿಕೆ ಒಪ್ಪಂದವನ್ನು ಸೋಮವಾರ ಅಂತಿಮಗೊಳಿಸಿವೆ.

ಒಪ್ಪಂದದ ಪ್ರಕಾರ, 90 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 32 ರಲ್ಲಿ ಸ್ಪರ್ಧಿಸಲಿದ್ದು, ನ್ಯಾಷನಲ್ ಕಾನ್ಫರೆನ್ಸ್ 51 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಉಳಿದ ಐದು ಸ್ಥಾನಗಳಲ್ಲಿ ಉಭಯ ಪಕ್ಷಗಳು ಸೌಹಾರ್ದ ಹೋರಾಟ ನಡೆಸಲಿವೆ.

ಹೆಚ್ಚುವರಿಯಾಗಿ, ಒಂದು ಸ್ಥಾನವನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್‌ವಾದಿ) ಮತ್ತು ಇನ್ನೊಂದು ಸ್ಥಾನವನ್ನು ಪ್ಯಾಂಥರ್ಸ್ ಪಕ್ಷಕ್ಕೆ ಹಂಚಲಾಗಿದೆ.

ಕಾಂಗ್ರೆಸ್, ಎನ್ ಸಿ ನಾಯಕರು
ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಎನ್‌ಸಿ ಪ್ರಣಾಳಿಕೆ ಬಿಡುಗಡೆ; ಆರ್ಟಿಕಲ್ 370 ಮರುಸ್ಥಾಪನೆ ಸೇರಿ 12 ಗ್ಯಾರಂಟಿ ಘೋಷಣೆ

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಮೈತ್ರಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಈ ಮೈತ್ರಿಯು ಪ್ರದೇಶವನ್ನು ವಿಭಜಿಸಲು ಮತ್ತು ಕೋಮುವಾದ ಮಾಡಲು ಬಯಸುವ ಶಕ್ತಿಗಳನ್ನು ಎದುರಿಸುವ ಗುರಿ ಹೊಂದಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.

ಇಲ್ಲಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ನಾವು ಒಟ್ಟಾಗಿ ಈ ಹೋರಾಟ ಪ್ರಾರಂಭಿಸಿದ್ದೇವೆ. ಈ ವಿಭಜಕ ಶಕ್ತಿಗಳನ್ನು ಎದುರಿಸಲು ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು ಮತ್ತು ಪಕ್ಷಗಳ ನಡುವಿನ ಮಾತುಕತೆಗಳು ಸೌಹಾರ್ದಯುತ ವಾತಾವರಣದಲ್ಲಿ ನಡೆದಿವೆ ಎಂದರು.

ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ ಸೀಟು ಹಂಚಿಕೆ ವ್ಯವಸ್ಥೆ ಕುರಿತು ಹೆಚ್ಚಿನ ವಿವರಗಳನ್ನು ನೀಡಿದ್ದು, ನ್ಯಾಷನಲ್ ಕಾನ್ಫರೆನ್ಸ್ 51 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಖಚಿತಪಡಿಸಿದ್ದಾರೆ. ಆದರೆ ಕಾಂಗ್ರೆಸ್ 32 ರಲ್ಲಿ ಸ್ಪರ್ಧಿಸಲಿದೆ. ಐದು ಕ್ಷೇತ್ರಗಳಲ್ಲಿ ಸೌಹಾರ್ದ ಸ್ಪರ್ಧೆ ನಡೆಯಲಿದೆ ಎಂದು ಅವರು ಪುನರುಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com