ನವದೆಹಲಿ: ಜಾರ್ಖಂಡ್‌ನ ಮಾಜಿ ಸಿಎಂ ಚಂಪೈ ಸೊರೇನ್ ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಲಿದ್ದಾರೆ.
ಸೋರೆನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಸಭೆಯ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಈ ವಿಷಯನ್ನು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಹಿಮಂತ ಬಿಸ್ವಾ ಶರ್ಮಾ, "ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸ್ವಲ್ಪ ಸಮಯದ ಹಿಂದೆ ಭೇಟಿಯಾದರು. ಅವರು ಆಗಸ್ಟ್ 30 ರಂದು ರಾಂಚಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ" ಎಂದು ಹೇಳಿದ್ದಾರೆ.
Advertisement