ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ 15 ಅಭ್ಯರ್ಥಿಗಳ ಪರಿಷ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕೇಂದ್ರಾಡಳಿತ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಮಾತ್ರ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಪರಿಷ್ಕೃತ ಪಟ್ಟಿಯಲ್ಲಿ 15 ಮಂದಿ ಮುಸ್ಲಿಂ ಅಭ್ಯರ್ಥಿಗಳಿದ್ದಾರೆ.
ಇದಕ್ಕೂ ಮುನ್ನ 44 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಆದರೆ ತಕ್ಷಣವೇ ಅದನ್ನು ಹಿಂಪಡೆದು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 19, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತಗಳನ್ನು ಎಣಿಕೆ ಮಾಡಲಾಗುತ್ತದೆ. 2019 ರಲ್ಲಿ ಆರ್ಟಿಕಲ್ 370 ರದ್ದುಗೊಂಡ ನಂತರ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣೆ ನಡೆಯುತ್ತಿದೆ. 2014 ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಕೊನೆಯದಾಗಿ ವಿಧಾನಸಭಾ ಚುನಾವಣೆಗಳು ನಡೆದಿದ್ದವು. ಬಿಜೆಪಿ 25 ಸ್ಥಾನಗಳಲ್ಲಿ ಗೆದ್ದಿದ್ದರೆ, ಪಿಡಿಪಿ 28, ಎನ್ ಸಿ 15, ಕಾಂಗ್ರೆಸ್ 12 ಸ್ಥಾನಗಳನ್ನು ಗೆದ್ದಿತ್ತು.
Advertisement