
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದೂರವಾಣಿಯೊಂದಿಗೆ ಮಾತನಾಡಿದ್ದು, ಉಭಯ ನಾಯಕರು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿ, ಬಾಂಗ್ಲಾದೇಶದ ರಾಜಕೀಯ ವಾತಾವರಣದ ಬಗ್ಗೆ ಮಾತನಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ನರೇಂದ್ರ ಮೋದಿ, ಉಕ್ರೇನ್ ನಲ್ಲಿ ಪರಿಸ್ಥಿತಿ ಸೇರಿದಂತೆ ವಿವಿಧ ಜಾಗತಿಕ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ವಿವರವಾದ ಅಭಿಪ್ರಾಯಗಳನ್ನು ಹಂಚಿಕೊಂಡೆವು. ಶಾಂತಿ ಮತ್ತು ಸ್ಥಿರತೆ ಬೇಗ ಮರಳಲು ಭಾರತದ ಸಂಪೂರ್ಣ ಬೆಂಬಲವನ್ನು ಪುನರುಚ್ಚರಿಸಿರುವುದಾಗಿ ಹೇಳಿದ್ದಾರೆ.
ಉಭಯ ನಾಯಕರು ಬಾಂಗ್ಲಾದೇಶ ಬಗ್ಗೆಯೂ ಚರ್ಚೆ ನಡೆಸಿದ್ದು, ಸಹಜ ಪರಿಸ್ಥಿತಿ ಮತ್ತು ಅಲ್ಪಸಂಖ್ಯಾತರು ಪ್ರಮುಖವಾಗಿ ಹಿಂದೂಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ಮಹತ್ವವನ್ನು ಮೋದಿ ಹೇಳಿದ್ದಾರೆ. ಈ ಕಳವಳಗಳನ್ನು ಪರಿಹರಿಸಲು ತ್ವರಿತ ಕ್ರಮದ ಅಗತ್ಯವನ್ನು ಇಬ್ಬರೂ ನಾಯಕರು ಒಪ್ಪಿಕೊಂಡಿದ್ದಾರೆ.
Advertisement