BRS ನಾಯಕಿ ಕೆ ಕವಿತಾಗೆ ಬಿಗ್ ರಿಲೀಫ್: ಸುಪ್ರೀಂ ಕೋರ್ಟ್ ನಿಂದ ಷರತ್ತುಬದ್ಧ ಜಾಮೀನು

ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.
ಕೆ ಕವಿತಾ
ಕೆ ಕವಿತಾ
Updated on

ನವದೆಹಲಿ: ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರಿ, ಬಿಆರ್ ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ನಿಂದ ಮಂಗಳವಾರ ಜಾಮೀನು ಸಿಕ್ಕಿದೆ.

ದೆಹಲಿ ಲಿಕ್ಕರ್ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಕೇಸಿಗೆ ಸಂಬಂಧಪಟ್ಟಂತೆ ಕವಿತಾಗೆ ಜಾಮೀನು ಸಿಕ್ಕಿದೆ. ದೆಹಲಿ ಅಕ್ರಮ ಲಿಕ್ಕರ್ ಹಗರಣದಲ್ಲಿ ಕಳೆದ ಮಾರ್ಚ್ 15ರಂದು ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಬಂಧಿಸಲ್ಪಟ್ಟಿದ್ದರು.

ಇಡಿ ಮತ್ತು ಸಿಬಿಐ ಎರಡೂ ಪ್ರಕರಣಗಳಲ್ಲಿ ಜಾಮೀನು ನೀಡಲಾಗಿದೆ. ಎರಡೂ ಪ್ರಕರಣಗಳಲ್ಲಿ ತಲಾ 10 ಲಕ್ಷ ಜಾಮೀನು ಬಾಂಡ್ ಇರಿಸುವಂತೆ ಹಾಗೂ ಪಾಸ್‌ಪೋರ್ಟ್ ನ್ನು ಒಪ್ಪಿಸುವಂತೆ ಷರತ್ತುಗಳನ್ನು ವಿಧಿಸಲಾಗಿದೆ. ಕೋರ್ಟ್ ಪ್ರಕ್ರಿಯೆಗಳ ನಂತರ ಕವಿತಾ ಬಿಡುಗಡೆಯಾಗಲಿದ್ದಾರೆ. ಸುಮಾರು 5 ತಿಂಗಳು ಜೈಲಿನಲ್ಲಿ ಕಳೆದ ಬಳಿಕ ಅವರಿಗೆ ಜಾಮೀನು ಮಂಜೂರಾಗಿದೆ.

ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಭಾಗಿಯಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಇಡಿ ಮತ್ತು ಸಿಬಿಐಗೆ ಯಾವ ಮಾಹಿತಿ ಮತ್ತು ಪೂರಕ ಅಂಶಗಳಿವೆ ಎಂದು ಕೋರ್ಟ್ ಕೇಳಿತು.

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರ ಪೀಠವು ಕ್ರಮವಾಗಿ ಕೇಂದ್ರೀಯ ತನಿಖಾ ದಳ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುತ್ತಿರುವ ಆಪಾದಿತ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಕವಿತಾ ಅವರ ಅರ್ಜಿಯ ವಿಚಾರಣೆ ನಡೆಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com