ಲಖನೌ: ಬಿಎಸ್‌ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರನ್ನು ಅವಿರೋಧವಾಗಿ ಮರು ಆಯ್ಕೆ ಮಾಡಲಾಗಿದೆ ಎಂದು ಪಕ್ಷ ಮಂಗಳವಾರ ತಿಳಿಸಿದೆ.
ಬಿಎಸ್‌ಪಿ ಕೇಂದ್ರ ಕಾರ್ಯಕಾರಿ ಸಮಿತಿ(ಸಿಇಸಿ) ಮತ್ತು ಹಿರಿಯ ರಾಷ್ಟ್ರ ಮಟ್ಟದ ಪದಾಧಿಕಾರಿಗಳು ಮತ್ತು ರಾಜ್ಯ ಪಕ್ಷದ ಘಟಕಗಳು ಹಾಗೂ ದೇಶಾದ್ಯಂತ ಆಯ್ಕೆಯಾದ ಪ್ರತಿನಿಧಿಗಳ ವಿಶೇಷ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಎಸ್ ಪಿ ಹೇಳಿದೆ.
68 ವರ್ಷದ ಮಾಯಾವತಿ ಅವರು ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ.
ಬಿಎಸ್ಪಿ ಸಂಸ್ಥಾಪಕ ಕಾನ್ಶಿ ರಾಮ್ ಅವರು ಎರಡು ದಶಕಗಳ ಹಿಂದೆ ಮಾಯಾವತಿ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸಿದ್ದರು.
Advertisement