ಮುಂಬೈ: ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. 9 ವರ್ಷದ ಮಗಳ ಮೇಲೆ ಆಕೆಯ 30 ವರ್ಷದ ತಂದೆಯೇ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ದಿಂಡೋಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜೂನ್‌ನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ. ಇತ್ತೀಚೆಗೆ ಬಾಲಕಿ ತನ್ನ ತಾಯಿಗೆ ನಡೆದ ಘಟನೆಯನ್ನು ವಿವರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಳಿಕ ತಾಯಿ ತನ್ನ ಮಗಳನ್ನು ದಿಂಡೋಶಿ ಪೊಲೀಸ್ ಠಾಣೆಗೆ ಕರೆದೊಯ್ದು ಆರೋಪಿ ಪತಿ ವಿರುದ್ಧ ದೂರು ನೀಡಿದ್ದಾರೆ.
ಆರೋಪಿ ವಿರುದ್ಧ BNS ನ ಸೆಕ್ಷನ್ 65 (2), 68 (A) ಮತ್ತು POCSO ಸೆಕ್ಷನ್ 4,10,12 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಆಗಸ್ಟ್ 30 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.
Advertisement