BJP ವಿರುದ್ಧ ಮಾತನಾಡಿದ್ದೇನೆಯೇ ವಿನಃ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಒಂದು ಪದವನ್ನೂ ಹೇಳಿಲ್ಲ: ಸಿಎಂ ಮಮತಾ ಬ್ಯಾನರ್ಜಿ

ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ.
ಸಿಎಂ ಮಮತಾ ಬ್ಯಾನರ್ಜಿ(ಸಂಗ್ರಹ ಚಿತ್ರ)
ಸಿಎಂ ಮಮತಾ ಬ್ಯಾನರ್ಜಿ(ಸಂಗ್ರಹ ಚಿತ್ರ)
Updated on

ಕೋಲ್ಕತಾ: ಬಿಜೆಪಿ ವಿರುದ್ಧ ಮಾತನಾಡಿದ್ದೇನೆಯೇ ವಿನಃ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಒಂದು ಪದವನ್ನೂ ಹೇಳಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಗುರುವಾರ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಮಮತಾ ಅವರು, ನಾನು ನಿನ್ನೆ ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ ಮಾಡಿದ ಭಾಷಣದಲ್ಲಿ ಉಲ್ಲೇಖಿಸಿದ ಕೆಲವು ವಿಷಯಗಳನ್ನು ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದುರುದ್ದೇಶದೊಂದಿಗೆ ತಪ್ಪು ಮಾಹಿತಿ ಹಂಚಿದ್ದಾರೆ, ಆದರೆ, ನಾನು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಒಂದೇ ಒಂದು ಪದವನ್ನೂ ಹೇಳಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ವೈದ್ಯಕೀಯ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಅವರ ಹೋರಾಟ ಪ್ರಾಮಾಣಿಕವಾಗಿದೆ. ನಾನು ಅವರಿಗೆ ಬೆದರಿಕೆ ಹಾಕಿಲ್ಲ. ಆದರೆ ಈ ಕುರಿತು ನನ್ನ ಮೇಲೆ ಆಪಾದನೆ ಹೊರಿಸಲಾಗಿದ್ದು, ಇದು ಸತ್ಯಕ್ಕೆ ದೂರವಾದ ಮಾತು ಎಂದು ಹೇಳಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ(ಸಂಗ್ರಹ ಚಿತ್ರ)
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅಸ್ತಿತ್ವದಲ್ಲಿರುವ ಕಾನೂನಿಗೆ ತಿದ್ದುಪಡಿ: ಮಮತಾ ಭರವಸೆ

ನಾನು ಬಿಜೆಪಿ ವಿರುದ್ಧ ಮಾತನಾಡಿದ್ದೇನೆ. ಏಕೆಂದರೆ ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ನಮ್ಮ ರಾಜ್ಯದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ಅವರ ವಿರುದ್ಧ ಧ್ವನಿ ಎತ್ತಿದ್ದೇನೆ. ಶ್ರೀ ರಾಮಕೃಷ್ಣ ಪರಮಹಂಸರ ಹೇಳಿಕೆಯನ್ನು ನಾನು ಭಾಷಣದಲ್ಲಿ ಉಲ್ಲೇಖಿಸಿದ್ದೇನೆ. ಒಮ್ಮೊಮ್ಮೆ ಧ್ವನಿ ಎತ್ತುವ ಅಗತ್ಯವಿದೆ ಎಂದು ಸಂತರು ಹೇಳಿದ್ದರು. ಅಪರಾಧ ಹಾಗೂ ಕ್ರಿಮಿನಲ್ ಅಪರಾಧಗಳು ನಡೆದಾಗ ಪ್ರತಿಭಟನೆಯ ಧ್ವನಿ ಎತ್ತಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com