ರಾಂಚಿ: ಜೆಎಂಎಂ ತೊರೆದು ಎರಡು ದಿನಗಳ ನಂತರ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಶುಕ್ರವಾರ ಬಿಜೆಪಿ ಸೇರಿದ್ದಾರೆ.
ಇಂದು ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಮ್ಮುಖದಲ್ಲಿ ಚಂಪೈ ಸೊರೆನ್ ಅವರು ತಮ್ಮ ಬೆಂಬಲಿಗರೊಂದಿಗೆ ಕೇಸರಿ ಪಕ್ಷವನ್ನು ಸೇರಿದರು.
67 ವರ್ಷದ ಬುಡಕಟ್ಟು ನಾಯಕ ಬಿಜೆಪಿಗೆ ಸೇರ್ಪಡೆಯಾಗಿದ್ದು, ಜೆಎಂಎಂನ ಪ್ರಮುಖ ಮತದಾರರಾಗಿದ್ದ ಪರಿಶಿಷ್ಟ ಪಂಗಡದ ಮತಗಳನ್ನು ಸೆಳೆಯಲು ಕೇಸರಿ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ.
ಜೆಎಂಎಂ ಮುಖ್ಯಸ್ಥ ಶಿಬು ಸೊರೆನ್ ಅವರ ಆಪ್ತರಾಗಿದ್ದ ಚಂಪೈ ಸೊರೆನ್ ಅವರು ಬುಧವಾರ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ)ಗೆ ರಾಜೀನಾಮೆ ನೀಡಿದ್ದರು ಮತ್ತು ಬುಡಕಟ್ಟು ಅಸ್ಮಿತೆ, ಅಸ್ತಿತ್ವ ಉಳಿಸಲು ಬಿಜೆಪಿಗೆ ಸೇರುವುದಾಗಿ ಹೇಳಿದ್ದರು.
Advertisement