'ಕೇಂದ್ರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಿ': ಸಿಎಂ ಮಮತಾ ಬ್ಯಾನರ್ಜಿಗೆ ಕೇಂದ್ರ ಮಹಿಳಾ ಖಾತೆ ಸಚಿವೆ ಉತ್ತರ

ಪಶ್ಚಿಮ ಬಂಗಾಳವು 88 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು (FTC) ಸ್ಥಾಪಿಸಿದೆ, ಇದು ಕೇಂದ್ರ ಸರ್ಕಾರದ ಯೋಜನೆಯಡಿ ಒಳಗೊಂಡಿರುವ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಿಗೆ ಸಮವಲ್ಲ (FTSCs) 0ಎಂದು ಹೇಳಿದರು.
'ಕೇಂದ್ರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಿ': ಸಿಎಂ ಮಮತಾ ಬ್ಯಾನರ್ಜಿಗೆ ಕೇಂದ್ರ ಮಹಿಳಾ ಖಾತೆ ಸಚಿವೆ ಉತ್ತರ
Updated on

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಅಪರಾಧಗಳನ್ನು ನಿಭಾಯಿಸಲು ಅಸ್ತಿತ್ವದಲ್ಲಿರುವ ಕಾನೂನುಗಳು ಸಾಕಷ್ಟು ಕಠಿಣವಾಗಿವೆ ಎಂದು ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಪ್ರತಿಪಾದಿಸಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರವು ಅದನ್ನು ಕಟ್ಟುನಿಟ್ಟಿನಿಂದ ಕಾನೂನುಬದ್ಧವಾಗಿ ಜಾರಿಗೆ ತರುವಂತೆ ಒತ್ತಾಯಿಸಿದರು.

ಒಂದೇ ವಾರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಎರಡನೇ ಪತ್ರ ಬರೆದಿರುವ ಕೇಂದ್ರ ಸಚಿವೆ ಅನ್ನಪೂರ್ಣ ದೇವಿ, ರಾಜ್ಯ ಸರ್ಕಾರವು ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳನ್ನು ನಿರ್ದಿಷ್ಟವಾಗಿ ವ್ಯವಹರಿಸಲು ಹೆಚ್ಚುವರಿ 11 ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳನ್ನು (FTSC) ಕಾರ್ಯಗತಗೊಳಿಸಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳವು 88 ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು (FTC) ಸ್ಥಾಪಿಸಿದೆ, ಇದು ಕೇಂದ್ರ ಸರ್ಕಾರದ ಯೋಜನೆಯಡಿ ಒಳಗೊಂಡಿರುವ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯಗಳಿಗೆ ಸಮವಲ್ಲ (FTSCs) ಎಂದು ಹೇಳಿದರು.

'ಕೇಂದ್ರದ ಕಾನೂನು ಮತ್ತು ನಿಯಮಗಳನ್ನು ಪಾಲಿಸಿ': ಸಿಎಂ ಮಮತಾ ಬ್ಯಾನರ್ಜಿಗೆ ಕೇಂದ್ರ ಮಹಿಳಾ ಖಾತೆ ಸಚಿವೆ ಉತ್ತರ
ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಕಠಿಣ ಕಾನೂನು ಜಾರಿಗೊಳಿಸಿ: ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆದ ದೀದಿ

ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಕಟ್ಟುನಿಟ್ಟಾದ ಕೇಂದ್ರ ಕಾನೂನು ಶಿಕ್ಷೆ ಜಾರಿಗೆ ತರಬೇಕೆಂದು ನಿನ್ನೆ ಮತ್ತೆ ಪ್ರಧಾನಿ ಮೋದಿಯವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದರು.

ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ರಾಷ್ಟ್ರವ್ಯಾಪಿ ಪ್ರತಿಭಟನೆ, ತೀವ್ರ ವಿರೋಧ ನಂತರ ಈ ವಿಷಯದ ಬಗ್ಗೆ ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ, ಅತ್ಯಾಚಾರ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಪಡಿಸಲು ಕಡ್ಡಾಯ ನಿಬಂಧನೆಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com