ಮಧುರೈ-ಬೆಂಗಳೂರು ಸೇರಿ ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಮೀರತ್-ಲಖನೌ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರಕೋಯಿಲ್ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
Updated on

ನವದೆಹಲಿ: ಬೆಂಗಳೂರು - ಮಧುರೈ ಸೇರಿದಂತೆ ಮೂರು ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು. ಈ ಮೂಲಕ ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ರೈಲು ಸಂಪರ್ಕವನ್ನು ಹೆಚ್ಚಿಸಿದರು.

ಮೀರತ್-ಲಖನೌ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, ಮಧುರೈ-ಬೆಂಗಳೂರು ಮತ್ತು ಚೆನ್ನೈ-ನಾಗರಕೋಯಿಲ್ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಪ್ರಸ್ತುತ, 100ಕ್ಕೂ ಹೆಚ್ಚು ವಂದೇ ಭಾರತ್ ರೈಲು ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಇವು ದೇಶಾದ್ಯಂತ 280ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುತ್ತಿವೆ.

ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ವಂದೇ ಭಾರತ್ ವೈಭವದ ಕಥನದ ನಡುವೆ Kavach ಅಳವಡಿಕೆಯಲ್ಲಿ ನಿಧಾನಗತಿಯ ವ್ಯಥೆ...

"ಇಂದು ಉತ್ತರದಿಂದ ದಕ್ಷಿಣಕ್ಕೆ ದೇಶದ ವಿಕಾಸ ಯಾತ್ರೆಗೆ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ... ಇಂದಿನಿಂದ ವಂದೇ ಭಾರತ್ ರೈಲು ಸೇವೆ ಮೀರತ್ - ಲಖನೌ, ಮಧುರೈ - ಬೆಂಗಳೂರು ಮತ್ತು ಚೆನ್ನೈ - ನಾಗರಕೋಯಿಲ್ ನಡುವೆ ಪ್ರಾರಂಭವಾಗಲಿದೆ" ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com