Andhra Pradesh Government Dissolves Wakf Board
ಆಂಧ್ರ ಪ್ರದೇಶ ವಕ್ಫ್ ಮಂಡಳಿ (ಸಂಗ್ರಹ ಚಿತ್ರ)

ವಕ್ಫ್ ಮಸೂದೆ ಅಲ್ಲ... Wakf Board ಅನ್ನೇ ವಜಾಗೊಳಿಸಿದ ಆಂಧ್ರ ಪ್ರದೇಶ ಸರ್ಕಾರ!

ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ.
Published on

ಅಮರಾವತಿ: ದೇಶಾದ್ಯಂತ ವಕ್ಫ್ ಮಸೂದೆ ಮತ್ತು ಕರ್ನಾಟಕದಲ್ಲಿ ವಕ್ಫ್ ವಿವಾದಗಳ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಅತ್ತ ಆಂಧ್ರ ಪ್ರದೇಶ ಸರ್ಕಾರ ವಕ್ಫ್ ಮಂಡಳಿಯನ್ನೇ ವಜಾಗೊಳಿಸಿ ಆದೇಶ ಹೊರಡಿಸಿದೆ.

ಹೌದು.. ವಕ್ಫ್ ಮಂಡಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ರಚಿಸಿದ್ದ ವಕ್ಫ್ ಬೋರ್ಡ್ ಅನ್ನು ಆಂಧ್ರ ಪ್ರದೇಶ ಸರ್ಕಾರ ವಿಸರ್ಜಿಸಿದೆ.

ಈ ಕುರಿತು ಶನಿವಾರ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಎನ್.ಎಂ.ಡಿ.ಫಾರೂಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Andhra Pradesh Government Dissolves Wakf Board
ತಿರುಮಲದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ: TTD

ಹಿಂದಿನ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊರಡಿಸಿದ್ದ ಜಿಒ-47 ರದ್ದುಗೊಳಿಸಿ ಹಾಲಿ ಸರ್ಕಾರ ಹೊಸ ಜಿಒ-75 ಹೊರಡಿಸಿದೆ. ಕಳೆದ ವರ್ಷ ಅಕ್ಟೋಬರ್ 21 ರಂದು ಹಿಂದಿನ ಸರ್ಕಾರವು ಮಂಡಳಿಯ ಸದಸ್ಯರ ನಾಮನಿರ್ದೇಶನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ನಂತರ ವಕ್ಫ್ ಮಂಡಳಿಯ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಹೈಕೋರ್ಟ್ ಮಧ್ಯಂತರ ಆದೇಶಗಳನ್ನು ನೀಡಿದೆ ಎಂದು ಸಚಿವ ಎನ್.ಎಂ.ಡಿ.ಫಾರೂಕ್ ಸ್ಪಷ್ಟಪಡಿಸಿದರು.

ಅಲ್ಲದೆ ಹಿಂದಿನ ಸರ್ಕಾರದ ಕ್ರಮಗಳಿಂದಾಗಿ ವಕ್ಫ್ ಬೋರ್ಡ್ ಎದುರಿಸಿದ ಕಾನೂನು ಮತ್ತು ಆಡಳಿತಾತ್ಮಕ ಸವಾಲುಗಳನ್ನು ಎತ್ತಿ ಹಿಡಿದ ಸಚಿವ ಫಾರೂಕ್, 'ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಪ್ರಸ್ತುತ ಸಮ್ಮಿಶ್ರ ಸರ್ಕಾರವು ಈ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.

ಹೊಸ ಆದೇಶ, GO-75, ವಕ್ಫ್ ಮಂಡಳಿಯಲ್ಲಿನ ಆಡಳಿತ ನಿರ್ವಾತವನ್ನು ಪರಿಹರಿಸುವ ಉದ್ದೇಶವನ್ನು ಹೊಂದಿದೆ. ವಕ್ಫ್ ಆಸ್ತಿಗಳನ್ನು ರಕ್ಷಿಸಲು ಮತ್ತು ಅದರ ಹೊಸ ನಿರ್ದೇಶನಗಳ ಅಡಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣವನ್ನು ಉತ್ತೇಜಿಸಲು ಸರ್ಕಾರವು ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com