ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ಹೆಸರು ಅಂತಿಮ: ಬಿಜೆಪಿ ನಾಯಕ

ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದರು.
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್
Updated on

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಡಿಸೆಂಬರ್ 2 ಅಥವಾ 3 ರಂದು ನಡೆಯಲಿರುವ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ.

ಇದಕ್ಕೂ ಮೊದಲು, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಬಿಜೆಪಿಯ ನಿರ್ಧಾರವನ್ನು ಬೆಂಬಲಿಸುವುದಾಗಿ ಹೇಳಿದ್ದರು.

"ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಹೊಸ ನಾಯಕನ ಆಯ್ಕೆಗೆ ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ" ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ದೇವೇಂದ್ರ ಫಡ್ನವೀಸ್
ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸಲಾಗಿದೆ: ರಾವ್ಸಾಹೇಬ್ ದಾನ್ವೆ

ಹೊಸ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಡಿಸೆಂಬರ್ 5 ರಂದು ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.

288 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಮಹಾಯುತಿ 230 ಸ್ಥಾನಗಳನ್ನು ಗೆದ್ದ ನಂತರ ಅಧಿಕಾರ ಹಂಚಿಕೆ ಕುರಿತು ಚರ್ಚಿಸಲು ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಕಳೆದ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿ ಶಾ ಅವರನ್ನು ಭೇಟಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com