ಕೋಟಾ: ನಿರ್ಮಾಣ ಹಂತದ ಸುರಂಗದ ಒಂದು ಭಾಗ ಕುಸಿದು ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಸುರಂಗ ಮಾರ್ಗ ಇದಾಗಿದ್ದು, ರಾಮಗಂಜ್ ಮಂಡಿಯ ಮೋದಕ್ ಪ್ರದೇಶದಲ್ಲಿ ಶನಿವಾರ ರಾತ್ರಿ ಅದರ ಒಂದು ಭಾಗ ಕುಸಿದಿದೆ ಎಂದು ಕೋಟಾ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್ ಶಂಕರ್ ಮಾಹಿತಿ ನೀಡಿದರು.
ಮೃತ ಕಾರ್ಮಿಕನನ್ನು ಶಂಶೇರ್ ಸಿಂಗ್ (33) ಗುರುತಿಸಲಾಗಿದ್ದು, ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶಂಕರ್ ತಿಳಿಸಿದ್ದಾರೆ.
ಘಟನೆಯ ನಂತರ ಪೊಲೀಸರು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
Advertisement