
ತಿರುವಣ್ಣಾಮಲೈ: ಫೆಂಗಲ್ ಚಂಡಮಾರುತದ ಪರಿಣಾಮವಾಗಿ ತಮಿಳನಾಡಿನ ತಿರುವಣ್ಣಾಮಲೈನಲ್ಲಿ ಭೂ ಕುಸಿತ ಸಂಭವಿಸಿದ್ದು, ಅವಶೇಷಗಳಡಿ ನಾಲ್ವರ ಮೃತದೇಹ ಪತ್ತೆಯಾಗಿದೆ.
ಭಾರೀ ಮಳೆಯಿಂದಾಗಿ ಒಂದೇ ಕುಟುಂಬದ ಏಳು ಸದಸ್ಯರು ಮಣ್ಣಿನಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇತರರ ರಕ್ಷಣೆಗಾಗಿ ರಕ್ಷಣೆಗಾಗಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ರಕ್ಷಣಾ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು, ಸುಮಾರು 20 ಗಂಟೆಯಿಂದ ರಕ್ಷಣಾ ಕಾರ್ಯಾಚರಣೆ ನಡೆತ್ತಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ, ಕಮಾಂಡೋ, ತಮಿಳುನಾಡಿನ ಅಗ್ನಿ ಶಾಮಕ ದಳ ಸೇರಿದಂತೆ ಸುಮಾರು 170 ಜನರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೃಹತ್ ಗಾತ್ರದ ಕಲ್ಲುಗಳು ಇರುವುದರಿಂದ ಸಂತ್ರಸ್ತರನ್ನು ಪತ್ತೆ ಹಚ್ಚಲು ಸ್ಕ್ಯಾನಿಂಗ್ ಯಂತ್ರಕ್ಕೆ ಕಷ್ಟವಾಗುತ್ತಿದೆ ಎಂದು ರಕ್ಷಣಾಧಿಕಾರಿ ಸುವಿಕ್ಕೈನ್ ರಾಜ್ TNIE ಗೆ ತಿಳಿಸಿದ್ದಾರೆ.
"ನಾವು ಜೆಸಿಬಿಗಳು ಮತ್ತು ಅಗೆಯುವ ಯಂತ್ರಗಳನ್ನು ತರಲು ಪ್ರಯತ್ನಿಸುತ್ತಿದ್ದೇವೆ. ಆದರೆ ಭಾರವಾದ ದೊಡ್ಡ ದೊಡ್ಡ ಕಲ್ಲುಗಳು ಇರುವುದರಿಂದ ಯಂತ್ರೋಪಕರಣಗಳನ್ನು ನಿರ್ವಹಿಸಲು ಸವಾಲಾಗುತ್ತಿದೆ. ಪರಿಣಾಮ ಕಾರ್ಯಾಚರಣೆ ವಿಳಂಬವಾಗುತ್ತಿದೆ" ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತಂಡ ಪ್ರಸ್ತುತ ಅವಶೇಷಗಳನ್ನು ತೆರವುಗೊಳಿಸಲು ಅರೆ, ಪಿಕಾಸಿಯಂತಹ ಸರಳ ಸಾಧನಗಳನ್ನು ಬಳಸುತ್ತಿದೆ. ಜೆಸಿಬಿ, ಅಗೆಯುವ ಯಂತ್ರ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಭಾರವಾದ ಕಲ್ಲುಗಳು ಯಂತ್ರೋಪಕರಣಗಳನ್ನು ನಿರ್ವಹಿಸಲು ಸವಾಲಾಗುತ್ತಿವೆ ಎಂದು ಅಧಿಕೃತ ಮೂಲಗಳು ವಿವರಿಸಿವೆ.
Advertisement