ಥಾಣೆ: ಮಹಾರಾಷ್ಟ್ರ ಹಂಗಾಮಿ ಸಿಎಂ ಏಕನಾಥ್ ಶಿಂಧೆ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಮಹಾರಾಷ್ಟ್ರದ ಮುಂದಿನ ಸರ್ಕಾರದ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಕುತೂಹಲವೂ ಮುಂದುವರೆದಿದೆ.
ಶಿಂಧೆ ಅನಾರೋಗ್ಯ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರು ಸಂಪೂರ್ಣ ತಪಾಸಣೆಗೆ ಸಲಹೆ ನೀಡಿದ್ದರು.
ಕಳೆದ ವಾರದಿಂದ ಜ್ವರ ಗಂಟಲಿನ ಸೋಂಕಿನಿಂದ ಶಿಂಧೆ ಬಳಲುತ್ತಿದ್ದರು. ಶಿವಸೇನಾ ನಾಯಕ ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಕಳೆದ ಶುಕ್ರವಾರ ಸತಾರಾ ಜಿಲ್ಲೆಯ ತಮ್ಮ ಗ್ರಾಮಕ್ಕೆ ತೆರಳಿದ್ದರು ಮತ್ತು ಡಿಸೆಂಬರ್ 1 ರಂದು ಮುಂಬೈಗೆ ಮರಳಿದ್ದರು.
ಮಹಾರಾಷ್ಟ್ರ ಸಿಎಂ ಆಯ್ಕೆ ಕಗ್ಗಂಟಾಗಿಯೇ ಉಳಿದಿದ್ದು, ಬಿಜೆಪಿ ನಾಯಕತ್ವದ ಮುಂದೆ ಇಟ್ಟಿರುವ ಬೇಡಿಕೆ ಈಡೇರದೇ ಇದ್ದಲ್ಲಿ, ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಹೊಸ ಸರ್ಕಾರದ ಭಾಗವಾಗುವುದೇ ಎಂಬ ಪ್ರಶ್ನೆ ಮೂಡಿದೆ. ಈ ನಡುವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರ ನೇತೃತ್ವದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆ ಕರೆಯಲು ನೇಮಿಸಿದೆ.
Advertisement