ಚಂಡೀಗಢದಲ್ಲಿ ಪ್ರಧಾನಿ ಮೋದಿ
ಚಂಡೀಗಢದಲ್ಲಿ ಪ್ರಧಾನಿ ಮೋದಿ

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಉಗ್ರರು ಕಾನೂನು ಸಂಕೀರ್ಣತೆಯ ಲಾಭ ಪಡೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಜುಲೈ 1 ರಿಂದ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಿದರು.
Published on

ಚಂಡೀಗಢ: ಚಂಡೀಗಢ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮಗಳು ಎಂಬ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಶೇ. 100 ರಷ್ಟು ಜಾರಿಗೆ ತಂದಿರುವ ದೇಶದ ಮೊದಲ ಕೇಂದ್ರಾಡಳಿತ ಪ್ರದೇಶವಾಗಿದೆ.

ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳ ಬದಲಿಗೆ ಜುಲೈ 1 ರಿಂದ ಜಾರಿಗೆ ಬಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಿದರು.

ಇಂದು ಪಂಜಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಯೋತ್ಪಾದಕರು ಅಥವಾ ಭಯೋತ್ಪಾದಕ ಸಂಘಟನೆಗಳು ಹೊಸ ಕಾನೂನುಗಳ ಅಡಿಯಲ್ಲಿ ಕಾನೂನಿನ ಸಂಕೀರ್ಣತೆಯ ಲಾಭವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.

ಹೊಸ ನ್ಯಾಯ ಸಂಹಿತೆಗಳು ಪ್ರತಿಯೊಂದು ಇಲಾಖೆಯ ಉತ್ಪಾದಕತೆಯನ್ನು ಹೆಚ್ಚಿಸುತ್ತವೆ ಮತ್ತು ದೇಶದ ಪ್ರಗತಿಯನ್ನು ವೇಗಗೊಳಿಸುತ್ತವೆ.

ಚಂಡೀಗಢದಲ್ಲಿ ಪ್ರಧಾನಿ ಮೋದಿ
ತಮಿಳು ನಾಡು ಪ್ರವಾಹ ನಿಭಾಯಿಸಲು ಕೇಂದ್ರದಿಂದ ಎಲ್ಲಾ ರೀತಿಯ ನೆರವು: ಸಿಎಂಗೆ ಪ್ರಧಾನಿ ಮೋದಿ ಭರವಸೆ

ದೀರ್ಘ ಮತ್ತು ವಿಳಂಬ ನ್ಯಾಯದ ಭಯದಿಂದಾಗಿ ಹೆಚ್ಚಿನ ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಲು ಬಯಸುವುದಿಲ್ಲ. ಈ ಭಯ ಕೊನೆಗೊಂಡಾಗ ಹೂಡಿಕೆಗಳು ಹೆಚ್ಚಾಗುತ್ತವೆ. ಆ ಮೂಲಕ ದೇಶದ ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು.

ಸಮಾನತೆ, ಸೌಹಾರ್ದತೆ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಗಳೊಂದಿಗೆ ನ್ಯಾಯ ಸಂಹಿತೆಯನ್ನು ಹೆಣೆಯಲಾಗಿದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರಾಗಿದ್ದರೂ, ಪ್ರಾಯೋಗಿಕ ವಾಸ್ತವ ವಿಭಿನ್ನವಾಗಿದೆ. ಬಡವರು ಕಾನೂನುಗಳಿಗೆ ಹೆದರುತ್ತಾರೆ, ನ್ಯಾಯಾಲಯ ಅಥವಾ ಪೊಲೀಸ್ ಠಾಣೆ ಮೆಟ್ಟಿಲೇರುತ್ತಾರೆ. ಹೊಸ ನ್ಯಾಯ ಸಂಹಿತೆ ಸಮಾಜದ ಮನೋವಿಜ್ಞಾನವನ್ನು ಬದಲಾಯಿಸುವ ಕೆಲಸ ಮಾಡುತ್ತದೆ ಎಂದರು.

ದೇಶದ ಕಾನೂನು ಸಮಾನತೆಯ ಭರವಸೆ ಎಂಬ ನಂಬಿಕೆ ಪ್ರತಿಯೊಬ್ಬ ಬಡವರಿಗೂ ಇರುತ್ತದೆ. ಇದು ನಮ್ಮ ಸಂವಿಧಾನದಲ್ಲಿ ಭರವಸೆ ನೀಡಿರುವ ನಿಜವಾದ ಸಾಮಾಜಿಕ ನ್ಯಾಯವನ್ನು ಸಾಕಾರಗೊಳಿಸಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com