
ಮಯೂರ್‌ಭಂಜ್: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಬುಧವಾರ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಲಿಕಾಪ್ಟರ್ ರಸ್ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಮಾಡ ಗ್ರಾಮದಲ್ಲಿ ತರ್ತು ಭೂಸ್ಪರ್ಶ ಮಾಡಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತರು ತೀವ್ರ ಆಘಾತಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಲ್ಯಾಂಡಿಂಗ್ ನಂತರ, ಪೈಲಟ್ ಹೆಲಿಕಾಪ್ಟರ್‌ನಿಂದ ಹೊರಬಂದು ಅದನ್ನು ಪರಿಶೀಲಿಸಿದರು ಮತ್ತು ಸುಮಾರು 30-40 ನಿಮಿಷಗಳ ನಂತರ ಹೆಲಿಕಾಪ್ಟರ್ ಸ್ಥಳದಿಂದ ನಿರ್ಗಮಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.
ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳಿಂದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್ ತಾಂತ್ರಿಕ ಸಮಸ್ಯೆ ಸರಿಪಡಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವರುಣ್ ಗುಂಟುಪಲ್ಲಿ ಅವರು ಹೇಳಿದ್ದಾರೆ.
Advertisement