ಶಿಂಧೆ, ಅಜಿತ್ ಪವಾರ್ ಜತೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಫಡ್ನವೀಸ್
ಶಿಂಧೆ, ಅಜಿತ್ ಪವಾರ್ ಜತೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಫಡ್ನವೀಸ್

'ನಾವು ಮೂವರು ಸರ್ಕಾರ ನಡೆಸುತ್ತೇವೆ': ಶಿಂಧೆ, ಅಜಿತ್ ಪವಾರ್ ಜತೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಫಡ್ನವೀಸ್

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ದೇವೇಂದ್ರ ಫಡ್ನವಿಸ್ ಅವರು ರಾಜ್ಯಪಾಲರನ್ನು ಭೇಟಿಯಾದರು.
Published on

ಮುಂಬೈ: ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆಯಾಗುತ್ತಿದ್ದು, ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ದೇವೇಂದ್ರ ಫಡ್ನವೀಸ್ ಅವರು ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರೊಂದಿಗೆ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ದೇವೇಂದ್ರ ಫಡ್ನವಿಸ್ ಅವರು ರಾಜ್ಯಪಾಲರನ್ನು ಭೇಟಿಯಾದರು. ಅವರಿಗೆ ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಸಾಥ್ ನೀಡಿದರು.

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವಿಸ್ ಅವರು, "ನಾವು ಮೂವರೂ ಸರ್ಕಾರವನ್ನು ನಡೆಸುತ್ತೇವೆ" ಎಂದು ಹೇಳಿದರು.

'ಸಿಎಂ ಮತ್ತು ಡಿಸಿಎಂ ಹುದ್ದೆಗಳು ಕೇವಲ ತಾಂತ್ರಿಕ ಹುದ್ದೆಗಳು ಅಷ್ಟೆ. ನಾವೆಲ್ಲರೂ ಮಹಾರಾಷ್ಟ್ರಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಮುಂಬರುವ ಸಭೆಗಳಲ್ಲಿ ಇತರ ಸಚಿವರನ್ನು ನಿರ್ಧರಿಸಲಾಗುವುದು. ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದೇವೆ ಮತ್ತು ಮೂರು ಪಕ್ಷಗಳ ಶಾಸಕ ಬೆಂಬಲ ಪತ್ರವನ್ನು ನೀಡಿದ್ದೇವೆ. ನಾನು ಮಹಾಯುತಿ ಸರ್ಕಾರದ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದು ನಮ್ಮ ಮಿತ್ರ ಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ರಾಜ್ಯಪಾಲರಿಗೆ ಮನವಿ ಮಾಡಿವೆ ಎಂದರು.

ಶಿಂಧೆ, ಅಜಿತ್ ಪವಾರ್ ಜತೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಫಡ್ನವೀಸ್
ಮಹಾರಾಷ್ಟ್ರ ಸಿಎಂ ಪದಗ್ರಹಣ ಆಹ್ವಾನ ಪತ್ರಿಕೆಯಲ್ಲಿ ಅಚ್ಚರಿ: ಎಲ್ಲರ ಮನಗೆಲ್ಲುತ್ತಿದೆ ಫಡ್ನವಿಸ್ ನಡೆ!

"ಶಿವಸೇನೆಯ ಅಧ್ಯಕ್ಷ ಮತ್ತು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ಹೆಸರನ್ನು ಶಿಫಾರಸು ಮಾಡಿ ಪತ್ರವನ್ನು ನೀಡಿದ್ದಾರೆ. ಇದರೊಂದಿಗೆ ಎನ್ ಸಿಪಿ ಅಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕ ಅಜಿತ್ ಪವಾರ್ ಅವರು ಸಹ ಇದೇ ರೀತಿಯ ಪತ್ರವನ್ನೂ ನೀಡಿದ್ದಾರೆ... ನಮ್ಮೊಂದಿಗಿರುವ ಪಕ್ಷೇತರ ಶಾಸಕರು ಸಹ ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದಾರೆ ಎಂದರು.

"ರಾಜ್ಯಪಾಲರು ಎಲ್ಲಾ ಮನವಿಗಳನ್ನು ಸ್ವೀಕರಿಸಿದ್ದು, ನಾಳೆ ಸಂಜೆ 5.30 ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ, ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಸೇರಿದಂತೆ ಹಲವು ರಾಷ್ಟ್ರೀಯ ಬಿಜೆಪಿ ನಾಯಕರು ಈ ಪ್ರಮಾಣ ವಚನ ಸ್ವೀಕಾರ ಸಮಾರಂಭ ಭಾಗವಹಿಸಲಿದ್ದಾರೆ.

X

Advertisement

X
Kannada Prabha
www.kannadaprabha.com