ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಇಂದು ಪದಗ್ರಹಣ ಮಾಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ದಿನ ಹಲವು ಕಡತಗಳಿಗೆ ಸಹಿ ಹಾಕಿದ್ದಾರೆ.
ಮುಖ್ಯಮಂತ್ರಿಯಾದ ಬೆನ್ನಲ್ಲೇ ಮೂಳೆ ಮಜ್ಜೆಯ ಕಸಿಗಾಗಿ ಕಾಯುತ್ತಿರುವ ರೋಗಿಗಳಿಗೆ ತಲಾ 5 ಲಕ್ಷ ರೂಪಾಯಿ ಬಿಡುಗಡೆ ಮಾಡುವ ಪ್ರಸ್ತಾವನೆಯ ಕಡತಕ್ಕೆ ಸಹಿ ಹಾಕಿದ್ದಾರೆ. ಫಡ್ನವಿಸ್ ಸಹಿ ಹಾಕಿರುವ ಮೊದಲ ಕಡತ ಇದಾಗಿದೆ.
ಪುಣೆ ಮೂಲದ ಚಂದ್ರಕಾಂತ್ ಕುರ್ಹಾಡೆ ಅವರ ಪತ್ನಿ ಪತಿಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೋರಿದ್ದರು. ಮೊದಲ ಸಂಪುಟ ಸಭೆಯ ಅಧ್ಯಕ್ಷತೆ ವಹಿಸುವ ಮುನ್ನ ಮುಖ್ಯಮಂತ್ರಿಗಳು ಕಡತಕ್ಕೆ ಸಹಿ ಹಾಕಿದರು.
ಆಜಾದ್ ಮೈದಾನದಲ್ಲಿ ಸಂಜೆ ನಡೆದ ಸಮಾರಂಭದಲ್ಲಿ ಫಡ್ನವೀಸ್ ಮತ್ತು ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು.
Advertisement