
ನವದೆಹಲಿ: ಭಾರತ ವಿರೋಧಿ ಶಕ್ತಿಗಳ ವಿರುದ್ಧ ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕು ಮತ್ತು ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ತಮ್ಮ ನಾಯಕರು ಕೆಲಸ ಮಾಡುವುದನ್ನು ಕಂಡರೆ ಧ್ವನಿ ಎತ್ತಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಒತ್ತಾಯಿಸಿದ್ದಾರೆ.
ಹಂಗೇರಿ-ಅಮೆರಿಕನ್ ಉದ್ಯಮಿ , ಕಾಶ್ಮೀರ ಸ್ವತಂತ್ರ ರಾಷ್ಟ್ರ ಎಂಬ ಕಲ್ಪನೆಯನ್ನು ಬೆಂಬಲಿಸಿದ ಜಾರ್ಜ್ ಸೊರೊಸ್ ಅವರ ಸಂಸ್ಥೆಯ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಂಟು ಬಹಳ ಗಂಭೀರ ವಿಚಾರವಾಗಿದೆ ಎಂದಿದ್ದಾರೆ. ಭಾರತ ವಿರೋಧಿ ಶಕ್ತಿಗಳೊಂದಿಗೆ ಕೆಲಸ ಮಾಡುತ್ತಿರುವವರು ಕಂಡುಬಂದರೆ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಎದುರಿಸಬೇಕು.
ತಮ್ಮದೇ ಪಕ್ಷದ ನಾಯಕರು ಭಾರತ ವಿರೋಧಿ ಶಕ್ತಿಗಳೊಂದಿಗೆ ಸೇರಿಕೊಂಡು ಕೆಲಸ ಮಾಡುತ್ತಿರುವುದು ಕಂಡುಬಂದರೂ ಅವರ ವಿರುದ್ಧ ಧ್ವನಿ ಎತ್ತಬೇಕು ಎಂದು ನಾನು ಕಾಂಗ್ರೆಸ್‌ನ ನಾಯಕರು ಮತ್ತು ಕಾರ್ಯಕರ್ತರಿಗೆ ಹೇಳಲು ಬಯಸುತ್ತೇನೆ" ಎಂದು ರಿಜಿಜು ಹೇಳಿದರು. ಡಿಸೆಂಬರ್ 13-14 ರಂದು ಲೋಕಸಭೆಯಲ್ಲಿ ಮತ್ತು ಡಿಸೆಂಬರ್ 16-17 ರಂದು ರಾಜ್ಯಸಭೆಯಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸರ್ಕಾರ ಕಾಂಗ್ರೆಸ್‌ಗೆ ತಿಳಿಸಿದೆ ಎಂದು ಸಚಿವರು ಹೇಳಿದರು. ಫೋರಂ ಆಫ್ ದಿ ಡೆಮಾಕ್ರಟಿಕ್ ಲೀಡರ್ಸ್ ಇನ್ ಏಷ್ಯಾ ಪೆಸಿಫಿಕ್ (ಎಫ್‌ಡಿಎಲ್-ಎಪಿ) ಫೌಂಡೇಶನ್‌ನ ಸಹ-ಅಧ್ಯಕ್ಷರಾಗಿರುವ ಸೋನಿಯಾ ಗಾಂಧಿ ಅವರು ಜಾರ್ಜ್ ಸೊರೊಸ್ ಫೌಂಡೇಶನ್‌ನಿಂದ ಹಣಕಾಸು ಒದಗಿಸುವ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಿಜೆಪಿ ಭಾನುವಾರ ಹೇಳಿಕೊಂಡಿದೆ.
Advertisement