ಉಪ ರಾಷ್ಟ್ರಪತಿ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಮುಂದು

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್(ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಸಮಾಜವಾದಿ ಪಕ್ಷ(ಎಸ್‌ಪಿ) ಸೇರಿದಂತೆ ಪ್ರತಿಪಕ್ಷಗಳ 70 ಸಂಸದರು ಈ ನಿರ್ಣಯವನ್ನು ಬೆಂಬಲಿಸಲಿದ್ದಾರೆ.
ಜಗದೀಪ್ ಧಂಖರ್
ಜಗದೀಪ್ ಧಂಖರ್
Updated on

ನವದೆಹಲಿ: ಭಾರತೀಯ ಸಂವಿಧಾನದ 67(ಬಿ) ವಿಧಿಯಡಿಯಲ್ಲಿ ರಾಜ್ಯಸಭಾ ಅಧ್ಯಕ್ಷ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ ಸಿದ್ಧತೆ ನಡೆಸುತ್ತಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್(ಟಿಎಂಸಿ), ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಸಮಾಜವಾದಿ ಪಕ್ಷ(ಎಸ್‌ಪಿ) ಸೇರಿದಂತೆ ಪ್ರತಿಪಕ್ಷಗಳ 70 ಸಂಸದರು ಈ ನಿರ್ಣಯವನ್ನು ಬೆಂಬಲಿಸಲಿದ್ದಾರೆ. ಧಂಖರ್ ಅವರು ರಾಜ್ಯಸಭೆಯ ಕಲಾಪಗಳನ್ನು ನಿಭಾಯಿಸುವ ಬಗ್ಗೆ ಪ್ರತಿಪಕ್ಷಗಳು ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಪಕ್ಷಪಾತಿಯಾಗಿದ್ದು, ಆಡಳಿತ ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಇಂಡಿಯಾ ಬ್ಲಾಕ್‌ನ ಸಂಸದರು ಪದೇ ಪದೇ ಆರೋಪಿಸಿದ್ದಾರೆ. ಅವರು ತಮ್ಮ ಭಾಷಣಗಳಿಗೆ ಆಗಾಗ್ಗೆ ಅಡ್ಡಿಪಡಿಸುತ್ತಾರೆ, ಪ್ರಮುಖ ವಿಷಯಗಳ ಮೇಲಿನ ಚರ್ಚೆಯನ್ನು ನಿರ್ಬಂಧಿಸುತ್ತಾರೆ ಮತ್ತು ಮೇಲ್ಮನೆಯಲ್ಲಿ ವಿವಾದಾತ್ಮಕ ಚರ್ಚೆಗಳ ಸಮಯದಲ್ಲಿ ಸರ್ಕಾರದ ಪರವಾಗಿರುತ್ತಾರೆ ಎಂದು ಪ್ರತಿಪಕ್ಷಗಳ ಸಂಸದರು ಆರೋಪಿಸಿದ್ದಾರೆ.

ಜಗದೀಪ್ ಧಂಖರ್
Watch | ಅದಾನಿ ಲಂಚದ ಆರೋಪ: ರಾಜ್ಯಸಭಾಧ್ಯಕ್ಷ ಧಂಖರ್-ಖರ್ಗೆ ನಡುವೆ ವಾಗ್ವಾದ!

ಈ ವರ್ಷದ ಆರಂಭದಲ್ಲಿ, ರಾಜ್ಯಸಭಾ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ಮುಂದಾಗಿವೆ ಎಂದು ವರದಿಗಳು ತಿಳಿಸಿವೆ.

ಬಜೆಟ್ ಅಧಿವೇಶನದಲ್ಲಿ, ವಿರೋಧ ಪಕ್ಷದ ಸಂಸದರು ರಾಜ್ಯಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಕಡಿಮೆ ಸಮಯ ನೀಡಿದ ಬಗ್ಗೆ ಮತ್ತು ಸ್ಥಳಾವಕಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೈಕ್ ಸ್ವಿಚ್ ಆಫ್ ಮಾಡಿರುವ ಆರೋಪ ಸೇರಿದಂತೆ ಪದೇ ಪದೇ ಭಾಷಣಕ್ಕೆ ಅಡ್ಡಿಪಡಿಸಿದ ನಿದರ್ಶನಗಳನ್ನು ವಿರೋಧ ಪಕ್ಷದ ಸಂಸದರು ಎತ್ತಿ ತೋರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com