
ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಮತ್ತು ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಹತ್ರಾಸ್ ಜಂಕ್ಷನ್ ಪೊಲೀಸ್ ಠಾಣೆ ವ್ಯಾಪ್ತಿಯ ಜೈತ್‌ಪುರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
"ಮೃತರ ಗುರುತು ಖಚಿತಪಡಿಸಿಕೊಳ್ಳಲು ಅವರ ಕುಟುಂಬ ಸದಸ್ಯರಿಗೆ ಕರೆ ಮಾಡಲಾಗಿದೆ" ಎಂದು ಸಿಕಂದರಾವ್ ಸರ್ಕಲ್ ಅಧಿಕಾರಿ ಶೈಮ್‌ವೀರ್ ಸಿಂಗ್ ಅವರು ಹೇಳಿದ್ದಾರೆ.
Advertisement