ದೇಶ

Bengaluru-Chennai National Highway: ಲಾರಿ ಢಿಕ್ಕಿ, ಬಸ್ ಪಲ್ಟಿ, 10 ಮಂದಿಗೆ ಗಾಯ, ಭೀಕರ Video

Bengaluru-Chennai National Highway: ಲಾರಿ ಢಿಕ್ಕಿ, ಬಸ್ ಪಲ್ಟಿ, 10 ಮಂದಿಗೆ ಗಾಯ, ಭೀಕರ Video
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ಅಪಘಾತ
Published On :

ಚೆನ್ನೈ: ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯ ತಾಂಡಾಲಂ ಬಳಿ ಬೃಹತ್ ಟಾರಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಸಂಸ್ಥೆಯ ಬಸ್ ಪಲ್ಟಿಯಾಗಿದ್ದು, ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿಗೆ ತೀವ್ರ ಗಾಯಗಳಾಗಿವೆ.

ಖಾಸಗಿ ಸಂಸ್ಥೆಯ ಬಸ್ ಯೂ ಟರ್ನ್ ಮಾಡಲು ಮುಂದಾದಾಗ ಹಿಂದಿನಿಂದ ವೇಗವಾಗಿ ಬಂದ ಟಾರಸ್ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

ಅಪಘಾತದಲ್ಲಿ ಬಸ್ ಮತ್ತು ಲಾರಿಯ ಮುಂಭಾಗವೂ ನಜ್ಜುಗುಜ್ಜಾಗಿದೆ. ಜೊತೆಗೆ ಚೆನ್ನೈ ನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೂ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ.

ಈ ದುರ್ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ 9 ಮಂದಿಗೆ ಗಂಭೀರ ಗಾಯಗಳಾಗಿವೆ. ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೊ ಕಾಲು ಮುರಿತವಾಗಿದ್ದು, ಲಾರಿ ಚಾಲಕ ವಾಹನದ ಮುಂಭಾಗದ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ. ಸ್ಥಳೀಯರು ಆತನನ್ನು ಹೊರಗೆಳೆದಿದ್ದಾರೆ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಜೆಸಿಬಿ ಬಳಸಿ ಲಾರಿ ಚಾಲಕನನ್ನು ರಕ್ಷಿಸಿದ್ದಾರೆ. ಅಂತೆಯೇ ಗಾಯಗೊಂಡ ಎಲ್ಲ ವ್ಯಕ್ತಿಗಳನ್ನು ಚಿಕಿತ್ಸೆಗಾಗಿ ಶ್ರೀಪೆರಂಬದೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಮುಂಜಾನೆ ಸಂಭವಿಸಿದ ಅಪಘಾತವು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಮನಾರ್ಹ ಆತಂಕ ಮತ್ತು ಅಡಚಣೆಯನ್ನು ಉಂಟುಮಾಡಿದೆ. ಇದೀಗ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.