
ಪುಣೆ: 18ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಜನ್ಮ ದಿನಾಚರಣೆಯನ್ನು ನಿಷೇಧಿಸಲಾಗಿದೆಯೇ? ಪ್ರಶ್ನಿಸಿದ ಬಾಂಬೆ ಹೈಕೋರ್ಟ್, ಈ ಟಿಪ್ಪು ಸುಲ್ತಾನ್ ಜಯಂತಿ ಸ್ಮರಣಾರ್ಥ ರ‍್ಯಾಲಿಯನ್ನು ನಡೆಸಲು ಕೋರಿದ ಮನವಿಯ ಬಗ್ಗೆ ನಿರ್ಧರಿಸುವಂತೆ ಪುಣೆ ಗ್ರಾಮಾಂತರ ಪೊಲೀಸರಿಗೆ ಗುರುವಾರ ಸೂಚಿಸಿದೆ.
ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳು ರ‍್ಯಾಲಿಗೆ ಅನುಮತಿ ನಿರಾಕರಿಸಲು ಕಾರಣವಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ರ‍್ಯಾಲಿಗೆ ಅನುಮತಿ ನೀಡುವಂತೆ ಪೊಲೀಸರಿಗೆ ನಿರ್ದೇಶನ ಕೋರಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷದ ಪುಣೆ ಘಟಕದ ಅಧ್ಯಕ್ಷ ಫೈಯಾಜ್ ಶೇಖ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಎಸ್ ಜಿ ಡಿಗೆ ಅವರ ವಿಭಾಗೀಯ ಪೀಠ, ಟಿಪ್ಪು ಸುಲ್ತಾನ್ ಜಯಂತಿ ನಿಷೇಧಿಸಲಾಗಿದೆಯೇ? ಎಂದು ಪ್ರಶ್ನಿಸಿದೆ.
ಮನವಿಯ ಪ್ರಕಾರ, ಪುಣೆ ಗ್ರಾಮಾಂತರ ಪೊಲೀಸರು ರ‍್ಯಾಲಿಗೆ ಅನುಮತಿ ನೀಡಲು ನಿರಾಕರಿಸಿದ್ದು, ತಮ್ಮ ಖಾಸಗಿ ಸ್ಥಳದಲ್ಲಿ ಕಾರ್ಯಕ್ರಮಗಳನ್ನು ಆಚರಿಸುವಂತೆ ಅರ್ಜಿದಾರರಿಗೆ ಸೂಚಿಸಲಾಗಿದೆ.
ಇಂತಹ ರ‍್ಯಾಲಿಗಳಿಂದ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
Advertisement