
ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಡ್ವಾಣಿಯವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಇಂದು ಬೆಳಿಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆ ದಾಖಲಾಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಬಿಡುಗಡೆಗೊಂಡಿದ್ದರು. ಇದೀಗ ಮತ್ತೆ ಏರುಪೇರು ಕಂಡು ಬಂದಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು.
ಈ ನಡುವೆ ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
Advertisement