ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ: ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಅತುಲ್ ಪತ್ನಿ, ಸಂಬಂಧಿಕರು

ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
Atul subhash in laws and Atul subhash
ಟೆಕ್ಕಿ ಅತುಲ್ ಪತ್ನಿ ಕುಟುಂಬ ಸದಸ್ಯರು (ಎಡಭಾಗದ ಚಿತ್ರ) ಅತುಲ್ ಸುಭಾಷ್ (ಬಲಭಾಗದ ಚಿತ್ರ)online desk
Updated on: 

ಅಲಹಾಬಾದ್: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ ಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಅವರ ಪತ್ನಿ ಮತ್ತು ಅವರ ಕುಟುಂಬ ಸದಸ್ಯರು ಶನಿವಾರ ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅತುಲ್ ಸುಭಾಷ್ ಅವರ ಪತ್ನಿ ನಿಕಿತಾ ಸಿಂಘಾನಿಯಾ, ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರು ಶುಕ್ರವಾರ ನಿಕಿತಾ ಸಿಂಘಾನಿಯಾ ಅವರ ಮನೆಗೆ ತೆರೆಳಿ ನೋಟಿಸ್ ನೀಡಿದ್ದು, ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ನಂತರ ಆರೋಪಿಗಳು ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ.

Atul subhash in laws and Atul subhash
ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ನ್ಯಾಯಾಲಯದಿಂದ ದಾಖಲೆ ಸಂಗ್ರಹ, ಅತುಲ್ ಪತ್ನಿಗೆ ನೋಟಿಸ್

34 ವರ್ಷದ ಇಂಜಿನಿಯರ್ ಸುಭಾಷ್ ಬೆಂಗಳೂರಿನಲ್ಲಿ ಕಳೆದ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಹೀಗಾಗಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಸಂಬಂಧಿಕರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com