ಲೋಕಸಭೆ: 'ಒಂದು ದೇಶ, ಒಂದು ಚುನಾವಣೆ' ಪರ 269 ಮತ, ವಿರುದ್ಧವಾಗಿ 198 ಮತ

ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ.
ಅರ್ಜುನ್ ರಾಮ್ ಮೇಘವಾಲ್
ಅರ್ಜುನ್ ರಾಮ್ ಮೇಘವಾಲ್
Updated on

ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಸಂವಿಧಾನಾತ್ಮಕ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

"ಒಂದು ದೇಶ, ಒಂದು ಚುನಾವಣೆ" ಮಸೂದೆ ಎಂದು ಉಲ್ಲೇಖಿಸಲ್ಪಡುವ ಸಂವಿಧಾನ(ನೂರಾ ಇಪ್ಪತ್ತೊಂಬತ್ತನೇ ತಿದ್ದುಪಡಿ) ತಿದ್ದುಪಡಿ ಮಸೂದೆ, 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸಿದರು.

ಈ ಮಸೂದೆಗೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಅಸಂವಿಧಾನಿಕ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತದೆ ಮತ್ತು ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಹೀಗಾಗಿ ಮಸೂದೆ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಬಳಿಕ 'ಒಂದು ದೇಶ, ಒಂದು ಚುನಾವಣೆ' ಮಸೂದೆಗೆ ಒಪ್ಪಿಗೆ ಪಡೆಯಲು ಮತಯಂತ್ರದ ಮೂಲಕ ಮತಕ್ಕೆ ಹಾಕಲಾಯಿತು. ಮಸೂದೆ ಪರವಾಗಿ 269 ಮತ ಹಾಗೂ ವಿರುದ್ಧವಾಗಿ 198 ಮತಗಳು ಚಲಾವಣೆಯಾಗಿವೆ.

ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಮತದಾನದ ನಂತರ ಕಲಾಪವನ್ನು ಮಧ್ಯಾಹ್ನ 3 ಗಂಟೆಯವರೆಗೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದೂಡಲಾಯಿತು.

ಅರ್ಜುನ್ ರಾಮ್ ಮೇಘವಾಲ್
ಲೋಕಸಭೆಯಲ್ಲಿ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡನೆ; ಅಸಂವಿಧಾನಿಕ ಎಂದ ಪ್ರತಿಪಕ್ಷಗಳು

ಮಸೂದೆಗೆ ಕಾಂಗ್ರೆಸ್, ಟಿಎಂಸಿ, ಎಸ್ಪಿ ಸೇರಿದಂತೆ ಹಲವು ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆ ತರುವ ಅಗತ್ಯ ಏನಿದೆ ಎಂದು ಸಮಾಜವಾದಿ ಲಕ್ಷದ ಸಂಸದ ಧರ್ಮೇಂದ್ರ ಯಾದವ್ ಅವರು ಪ್ರಶ್ನಿಸಿದ್ದಾರೆ.

ಇದಕ್ಕು ಮುನ್ನ 'ಒಂದು ದೇಶ, ಒಂದು ಚುನಾವಣೆ' ಮಸೂದೆ ಮಂಡಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಔಪಚಾರಿಕ ನೋಟಿಸ್ ಸಲ್ಲಿಸಿದ್ದರು.

ನಿಯಮ 72 ರ ಅಡಿಯಲ್ಲಿ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ನೀಡಿದ ನೋಟಿಸ್‌ನಲ್ಲಿ ತಿವಾರಿ ಅವರು ಮಸೂದೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಭಾರತದ ಫೆಡರಲ್ ರಚನೆ ಮತ್ತು ಪ್ರಜಾಪ್ರಭುತ್ವ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಇದರ ಉದ್ದೇಶವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com