ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

ಮಾಧವನ್ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರೊಂದಿಗೆ (ರಾಜೀವ್ ಗಾಂಧಿ & ಸೋನಿಯಾ ಗಾಂಧಿ) ಉತ್ತಮ ಬಾಂಧವ್ಯ ಹೊಂದಿದ್ದರು.
Rahul Gandhi pays last respects to PP Madhavan
ಪಿ.ಪಿ.ಮಾಧವನ್ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
Updated on: 

ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ.

ಮಾಧವನ್ ಡಿಸೆಂಬರ್ 16 ರಂದು ತಮ್ಮ 73 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಸೇರಿದಂತೆ ಪಕ್ಷದ ನಾಯಕರು ಪಿ.ಪಿ. ಮಾಧವನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ಮಾಧವನ್ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರೊಂದಿಗೆ (ರಾಜೀವ್ ಗಾಂಧಿ & ಸೋನಿಯಾ ಗಾಂಧಿ) ಉತ್ತಮ ಬಾಂಧವ್ಯ ಹೊಂದಿದ್ದರು. ಮಾಧವನ್ ಅವರ ಹಠಾತ್ ನಿಧನ ಕುಟುಂಬ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮಾಧವನ್ ಜಿ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಕೆ.ಸಿ.ವೇಣುಗೋಪಾಲ್ ಸಂತಾಪ ಸೂಚಿಸಿದ್ದಾರೆ.

Rahul Gandhi pays last respects to PP Madhavan
ಲೋಕಸಭೆ: ಇಂದಿರಾ ಗಾಂಧಿ ಪತ್ರ ಓದಿ ರಾಹುಲ್ ಗೆ ಬಿಜೆಪಿ, ಶಿವಸೇನೆ ತಿರುಗೇಟು!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com