
ಮುಂಬೈ: ವಾಣಿಜ್ಯ ನಗರಿ ಮುಂಬೈ ಕ್ರೇಂದ್ರಾಡಳಿತ ಪ್ರದೇಶವಾಗಬೇಕು ಎಂಬ ಕರ್ನಾಟಕದ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವಿರುದ್ಧ ಇಂಡಿಯಾ ಮೈತ್ರಿಕೂಟದ ಶಿವಸೇನಾ (ಯುಬಿಟಿ) ಶಾಸಕ ಆದಿತ್ಯ ಠಾಕ್ರೆ ಕಿಡಿಕಾರಿದ್ದಾರೆ.
ಮಹಾರಾಷ್ಟ್ರದ ನಾಯಕರು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ. ಹಾಗಿದ್ದರೆ ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಯಾವುದೇ ಪ್ರಯತ್ನ ಸಹಿಸುವುದಿಲ್ಲ ಎಂದರು.
ಸವದಿ ಹೇಳಿಕೆಯನ್ನು ಖಂಡಿಸಿದ ಆದಿತ್ಯ ಠಾಕ್ರೆ, ಕಾಂಗ್ರೆಸ್ ಅಥವಾ ಬಿಜೆಪಿ ಯಾವುದೇ ಪಕ್ಷವಾಗಿರಲಿ, ಮುಂಬೈಯನ್ನು ಮಹಾರಾಷ್ಟ್ರದಿಂದ ಬೇರ್ಪಡಿಸುವ ಪ್ರಯತ್ನವನ್ನು ಶಿವಸೇನಾ (ಯುಬಿಟಿ) ಸಹಿಸುವುದಿಲ್ಲ. ಮುಂಬೈ ನಮ್ಮ ಜನ್ಮಭೂಮಿ. ಮರಾಠರು ಅದನ್ನು ರಕ್ತನೀಡಿ ಕಟ್ಟಿದ್ದಾರೆ. ನಮಗೆ ಮುಂಬೈಯನ್ನೂ ಯಾರೂ ಕೊಟ್ಟಿಲ್ಲ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ ಸಿಪಿ (ಎಸ್ ಪಿ) ಹಾಗೂ ಶಿವಸೇನಾ (ಯುಬಿಟಿ) ಮಹಾ ವಿಕಾಸ್ ಆಘಾಡಿಯ ಮೈತ್ರಿ ಪಕ್ಷಗಳಾಗಿವೆ.
Advertisement