
ಮುಂಬೈ: ಡಿಸೆಂಬರ್ 15 ರಂದು ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದ ಮೊದಲ ಸಂಪುಟ ವಿಸ್ತರಣೆಯಲ್ಲಿ ಮಹಾಯುತಿ ಮಿತ್ರಪಕ್ಷಗಳ ಮೂವತ್ತೊಂಬತ್ತು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಸಚಿವರು ಖಾತೆಗಳ ಹಂಚಿಕೆಗಾಗಿ ಕಾಯುತ್ತಿದ್ದಾರೆ. ಕೆಲವು ಬದಲಾವಣೆಗಳೊಂದಿಗೆ ಹಿಂದಿನ ಸರ್ಕಾರದ ಹಂಚಿಕೆ ಸೂತ್ರದ ಆಧಾರದ ಮೇಲೆ ಮೈತ್ರಿ ಪಾಲುದಾರರಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ನಡುವೆ ಖಾತೆಗಳನ್ನು ಹಂಚಲಾಗುವುದು ಎಂದು ಮೂಲಗಳು ಹೇಳುತ್ತವೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗೃಹ ಖಾತೆಯನ್ನು ಮತ್ತು ಬಿಜೆಪಿ ಕಂದಾಯ ಖಾತೆಯನ್ನು ಸಹ ಉಳಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತಿದೆ. ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಲೋಕೋಪಯೋಗಿ ಇಲಾಖೆ ಜೊತೆಗೆ ನಗರಾಭಿವೃದ್ಧಿ ಖಾತೆ ನೀಡಲಾಗುವುದು ಮತ್ತು ಮತ್ತೊಬ್ಬ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಹಣಕಾಸು, ಕೃಷಿ ಖಾತೆ ಮತ್ತು ಇತರ ಖಾತೆಗಳನ್ನು ಅವರ ಪಕ್ಷದ ಮಂತ್ರಿಗಳಿಗೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಹಾಯುತಿ ಮೈತ್ರಿಕೂಟದ ಮೂವರು ನಾಯಕರಾದ ದೇವೇಂದ್ರ ಫಡ್ನವಿಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ - ಅವರು ಖಾತೆ ಹಂಚಿಕೆ ಕುರಿತು ಸರಣಿ ಸಭೆಗಳನ್ನು ನಡೆಸಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಶಿವಸೇನೆ ಕೂಡ ಚೌಕಾಸಿ ನಡೆಸುತ್ತಿದ್ದು, ಪ್ರಮುಖ ಖಾತೆಗಳನ್ನು ಉಳಿಸಿಕೊಳ್ಳಲು ಬಯಸುತ್ತಿದೆ.
ಖಾತೆಗಳ ಘೋಷಣೆ ವಿಳಂಬದ ಬಗ್ಗೆ ಪವಾರ್ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಜಿತ್ ಪವಾರ್ ಅವರು ಹಣಕಾಸು ಸಚಿವಾಲಯವನ್ನು ಪಡೆಯಲು ಉತ್ಸುಕರಾಗಿದ್ದಾರೆ ಮತ್ತು ಪುಣೆ ಜಿಲ್ಲೆಯ ಉಸ್ತುವಾರಿ ಬಯಸುತ್ತಿದ್ದಾರೆ. ಆದರೆ, ಒಂದನ್ನು ಆಯ್ಕೆ ಮಾಡುವಂತೆ ಬಿಜೆಪಿ ಕೇಳಿಕೊಂಡಿದೆ. ಬಿಜೆಪಿಯ ಹಿರಿಯ ನಾಯಕ ಹಾಗೂ ಸಚಿವ ಚಂದ್ರಕಾಂತ್ ಪಾಟೀಲ್ ಅವರು ಪುಣೆ ಜಿಲ್ಲೆಯ ಉಸ್ತುವಾರಿ ಸಚಿವರಾಗಲು ಉತ್ಸುಕರಾಗಿದ್ದಾರೆ. ಬಿಜೆಪಿಗೆ ಪುಣೆ ಅತ್ಯಂತ ಪ್ರಮುಖ ಜಿಲ್ಲೆಯಾಗಿದ್ದು ಅದು ಪಶ್ಚಿಮ ಮಹಾರಾಷ್ಟ್ರಕ್ಕೆ ಬಾಗಿಲು ತೆರೆಯುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ನಾಗ್ಪುರದಲ್ಲಿ ನಡೆದ ವಿಧಾನಸಭೆ ಅಧಿವೇಶನದ ಮೊದಲ ದಿನವೇ ಪ್ರಮಾಣ ವಚನ ಸ್ವೀಕರಿಸಿದ್ದೇವೆ, ಆದರೆ ಅವರಿಗೆ ಇನ್ನೂ ಜವಾಬ್ದಾರಿಗಳು ಸಿಕ್ಕಿಲ್ಲ ಎಂದು ಸಚಿವರೊಬ್ಬರು ಹೇಳಿದರು. ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದ್ದೇವೆ. ಆದರೆ ಇದು ದಿನದಿಂದ ದಿನಕ್ಕೆ ಹೆಚ್ಚು ಗೊಂದಲಮಯವಾಗುತ್ತಿದೆ. ಮೂರೂ ಪಕ್ಷಗಳ ನಾಯಕರು ಅವ್ಯವಸ್ಥೆಯನ್ನು ಬಗೆಹರಿಸಬೇಕು, ಇಲ್ಲದಿದ್ದರೆ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಸುಮಾರು ಒಂದು ತಿಂಗಳು ಕಳೆದರೂ ಇನ್ನೂ ಖಾತೆ ಹಂಚಿಕೆಯಾಗಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಕೆಲಸಕ್ಕೆ ಅನುವಾಗಿಲ್ಲ ಎಂದು ಹೇಳಿದರು.
ಮೊದಲ ಸಂಪುಟ ವಿಸ್ತರಣೆಯಲ್ಲಿ, ಹಿಂದಿನ ಮಹಾಯುತಿ ಸರ್ಕಾರದಲ್ಲಿ 10 ಸಚಿವರನ್ನು ಕೈಬಿಟ್ಟು 16 ಹೊಸ ಮುಖಗಳನ್ನು ಸೇರ್ಪಡೆಗೊಳಿಸಲಾಯಿತು. ಬಿಜೆಪಿ 19 ಸಚಿವ ಸ್ಥಾನಗಳನ್ನು ಪಡೆದುಕೊಂಡಿದೆ, ಶಿಂಧೆ ನೇತೃತ್ವದ ಶಿವಸೇನೆ 11 ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ 9 ಸಚಿವ ಸ್ಥಾನಗಳನ್ನು ಪಡೆದುಕೊಂಡಿದೆ.
Advertisement