ಕೆಲವು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು 10-15 ಸಾವಿರ ರೂ ಪಿಂಚಣಿ ಪಡೆಯುತ್ತಿರುವುದು ದುರದೃಷ್ಟಕರ: ಸುಪ್ರೀಂ ಕೋರ್ಟ್

ಹೈಕೋರ್ಟ್ ಗಳ ಕೆಲವು ನಿವೃತ್ತ ನ್ಯಾಯಾಧೀಶರ ಸ್ಥಿತಿಗತಿ ಚಿಂತಾಜನಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೇಳಿದೆ.
Supreme court
ಸುಪ್ರೀಂ ಕೋರ್ಟ್
Updated on

ನವದೆಹಲಿ: ಕೆಲವು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳು 10,000 ರಿಂದ 15,000 ರೂಪಾಯಿಗಳವರೆಗೆ ಪಿಂಚಣಿ ಪಡೆಯುತ್ತಿರುವುದು ಕರುಣಾಜನಕ ಸ್ಥಿತಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಹೈಕೋರ್ಟ್ ಗಳ ಕೆಲವು ನಿವೃತ್ತ ನ್ಯಾಯಾಧೀಶರ ಸ್ಥಿತಿಗತಿ ಚಿಂತಾಜನಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೇಳಿದೆ.

ಕೆಲವರು ತಿಂಗಳಿಗೆ 15 ಸಾವಿರ ರೂಪಾಯಿ ಪಿಂಚಣಿ ಪಡೆಯುತ್ತಿದ್ದಾರೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪೀಠವು ಅಚ್ಚರಿ ವ್ಯಕ್ತಪಡಿಸಿದೆ. ನೀವು ಪ್ರತಿಯೊಂದು ವಿಷಯದಲ್ಲೂ ಕಾನೂನು ವಿಧಾನವನ್ನು ಹೊಂದಲು ಸಾಧ್ಯವಿಲ್ಲ. ಕೆಲವೊಮ್ಮೆ, ನೀವು ಮಾನವೀಯ ಧೋರಣೆಯನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿತು. 13 ವರ್ಷಗಳ ಕಾಲ ಜಿಲ್ಲಾ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ನಂತರ ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ಅರ್ಜಿದಾರರು, ಪಿಂಚಣಿ ಲೆಕ್ಕಾಚಾರ ಮಾಡುವಾಗ ಅಧಿಕಾರಿಗಳು ತಮ್ಮ ನ್ಯಾಯಾಂಗ ಸೇವೆಯನ್ನು ಪರಿಗಣಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Supreme court
'ರಾಜಕೀಯ-ಧಾರ್ಮಿಕ ಪೂರ್ವಾಗ್ರಹ ಹೊಂದಿರುವವರನ್ನು judge ಮಾಡಬಾರದು': ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ ಕೆ ಪಟ್ನಾಯಕ್

ಅವರ ಅಹವಾಲುಗಳನ್ನು ಆಲಿಸಿದ ಸುಪ್ರೀಂ ಕೋರ್ಟ್, 6,000 ಮತ್ತು 15,000 ರೂಪಾಯಿ ಪಿಂಚಣಿ ಪಡೆಯುತ್ತಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿದ್ದಾರೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದೆ.

1989ರ ರುಬಯ್ಯ ಸಯೀದ್ ಅಪಹರಣ ಮತ್ತು 1990 ರ ಶ್ರೀನಗರ ಶೂಟೌಟ್ ಪ್ರಕರಣಗಳ ವಿಚಾರಣೆಯನ್ನು ಜಮ್ಮುವಿನಿಂದ ದೆಹಲಿಗೆ ವರ್ಗಾಯಿಸಲು ಸಿಬಿಐ ಮಾಡಿದ ಮನವಿಗೆ ಪ್ರತಿಕ್ರಿಯಿಸಲು ಸುಪ್ರೀಂ ಕೋರ್ಟ್ ಆರು ಆರೋಪಿಗಳಿಗೆ ಎರಡು ವಾರಗಳ ಕಾಲಾವಕಾಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com