
ಬರೇಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಅನಿಲ್ ಎಂಬ ವ್ಯಕ್ತಿ, ತುರ್ತು ಸೇವಾ ಸಂಖ್ಯೆ 112 ಕ್ಕೆ ಡಯಲ್ ಮಾಡಿ, ಜನವರಿ 26 ರಂದು ಮುಖ್ಯಮಂತ್ರಿಯನ್ನು ಶೂಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಇಜ್ಜತ್‌ನಗರ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಇತರ ಅಧಿಕಾರಿಗಳಿಗೂ ಬೆದರಿಕೆ ಹಾಕಿದ್ದಾನೆ ಎಂದು ಅವರು ಹೇಳಿದ್ದಾರೆ.
"ಮಂಗಳವಾರ ರಾತ್ರಿ ಬೆದರಿಕೆ ಬಂದ ನಂತರ, ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಆರೋಪಿಯ ಫೋನ್ ಸ್ವಿಚ್ ಆಫ್ ಆಗಿತ್ತು.
ರಾತ್ರಿಯಿಡೀ ನಡೆಸಿದ ವ್ಯಾಪಕ ಕಾರ್ಯಾಚರಣೆಯ ನಂತರ, ಅನಿಲ್‌ನನ್ನು ಪತ್ತೆ ಮಾಡಿ ಬುಧವಾರ ಬಂಧಿಸಲಾಯಿತು” ಎಂದು ಇಜ್ಜತ್‌ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಧನಂಜಯ್ ಪಾಂಡೆ ತಿಳಿಸಿದ್ದಾರೆ.
ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಗುರುವಾರದ ನಂತರ ಅನಿಲ್ ನನ್ನು ಇಲ್ಲಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Advertisement