ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ರಾಸಾಯನಿಕ ಹೊತ್ತ ಟ್ರಕ್ ಡಿಕ್ಕಿ: ಮೃತರ ಸಂಖ್ಯೆ 7ಕ್ಕೆ ಏರಿಕೆ, 37 ಮಂದಿಗೆ ಗಾಯ

ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ ಪ್ರದೇಶಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
The site of a massive fire that broke out following a truck collision on the Jaipur-Ajmer national highway.
ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಡಿಕ್ಕಿಯಾದ ನಂತರ ಭಾರಿ ಬೆಂಕಿ ಕಾಣಿಸಿಕೊಂಡಿದೆ.
Updated on

ಜೈಪುರ: ಇಂದು ಶುಕ್ರವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಮತ್ತು ಬಹು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಜೈಪುರ-ಅಜ್ಮೀರ್ ಹೆದ್ದಾರಿಯ ಒಂದು ಭಾಗ ನರಕಯಾತನೆಯಾಗಿ ಮಾರ್ಪಟ್ಟಿದೆ, ದುರ್ಘಟನೆಯಲ್ಲಿ ಏಳು ಜನರು ಮೃತಪಟ್ಟಿದ್ದಾರೆ. 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ದಟ್ಟವಾದ ಕಪ್ಪು ಹೊಗೆ ಪ್ರದೇಶದಲ್ಲಿ ತುಂಬಿಕೊಂಡಿದೆ.

ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ ಪ್ರದೇಶಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಗೆ ಆಹುತಿಯಾದ ದೃಶ್ಯವನ್ನು ಭಯಾನಕತೆಯಿಂದ ವಿವರಿಸಿದ್ದಾರೆ. ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಾಹನಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದರು.

The site of a massive fire that broke out following a truck collision on the Jaipur-Ajmer national highway.
ಬೆಂಗಳೂರಿನಲ್ಲಿ 3 ಪ್ರತ್ಯೇಕ ರಸ್ತೆ ಅಪಘಾತ; ಜಾರ್ಖಂಡ್‌ ವ್ಯಕ್ತಿ ಸೇರಿ ಮೂವರು ಸಾವು

ಆಗ್ನಿಶಾಮಕ ದಳದ ತಂಡಗಳು ಆರಂಭದಲ್ಲಿ ಸುಟ್ಟುಹೋದ ವಾಹನಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಈ ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿವೆ ಆದರೆ ಅದೃಷ್ಟವಶಾತ್ ಅವು ಸುರಕ್ಷಿತವಾಗಿವೆ ಎಂದು ಅವರು ಹೇಳಿದರು. ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲು 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ಎಸ್‌ಎಂಎಸ್ ಆಸ್ಪತ್ರೆಗೆ ಧಾವಿಸಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.

ಅಪಘಾತದಿಂದಾಗಿ ಹೆದ್ದಾರಿಯ ಸುಮಾರು 300 ಮೀಟರ್ ಜನನಿಬಿಡ ಪ್ರದೇಶವು ಪರಿಣಾಮ ಬೀರಿತು, ಇದು ವಾಹನಗಳ ಉದ್ದನೆಯ ಸರತಿಗೆ ಕಾರಣವಾಯಿತು. ಹೆದ್ದಾರಿಯುದ್ದಕ್ಕೂ ಕೆಲವು ಸಂಸ್ಥೆಗಳಿಗೆ ಬೆಂಕಿ ಆವರಿಸಿದೆ ಆದರೆ ನಿಜವಾದ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಗೋಚರಿಸುತ್ತಿವೆ. ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಜಿಲ್ಲಾಡಳಿತದ ತಂಡ ಆಸ್ಪತ್ರೆಯಲ್ಲಿದೆ. ಸೂಕ್ತ ಮಾಹಿತಿಗಾಗಿ ಸಂಪರ್ಕಿಸಲು ಜೈಪುರ ಪೊಲೀಸರು ಸಹಾಯವಾಣಿ ಸಂಖ್ಯೆ 9166347551, 8764688431 ಮತ್ತು 7300363636 ನ್ನು ಬಿಡುಗಡೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com