
ನವದೆಹಲಿ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ನಿಷೇಧಿತ PFI ಸಂಘಟನೆಯ ರಾಜ್ಯ ಕಾರ್ಯಕಾರಿ ಸದಸ್ಯನೊಬ್ಬನನ್ನು ರಾಷ್ಟ್ರೀಯ ತನಿಖಾ ದಳವು ಶುಕ್ರವಾರ ಇಲ್ಲಿನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಬಂಧಿಸಿದೆ.
ಬಂಧಿತನನ್ನು ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 22, 2022 ರಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ PFI ಸಂಘಟನೆಯ ಸದಸ್ಯರು ಹತ್ಯೆ ಮಾಡಿದ್ದರು.ಆಗಸ್ಟ್ 4, 2022 ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ದಳ ಇಲ್ಲಿಯವರಗೂ 20 ಮಂದಿಯನ್ನು ಬಂಧಿಸಿದೆ. ತಲೆ ಮರೆಸಿಕೊಂಡಿರುವ ಮೂವರು ಸೇರಿದಂತೆ 23 ಆರೋಪಿಗಳನ್ನು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ.
ಬಂಧಿತ ಮೊಹಮ್ಮದ್ ಶರೀಫ್ ಕೂಡಾ PFI ಸಂಘಟನೆಯ ಸದಸ್ಯರಾಗಿದ್ದು, ಮಿತ್ತೂರಿನ ಪ್ರೀಡಂ ಕಮ್ಯೂನಿಟಿ ಹಾಲ್ ನಲ್ಲಿ ತಂಡದ ಸದಸ್ಯರಿಗೆ ಶಸಾಸ್ತ್ರ ತರಬೇತಿಯಲ್ಲಿ ಸಹ ಆರೋಪಿಗಳೊಂದಿಗೆ ಭಾಗಿಯಾಗಿದ್ದ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ NIA ಅಧಿಕಾರಿಗಳು ತಿಳಿಸಿದ್ದಾರೆ.
Advertisement