
ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ದಲಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಡಾ. ಅಂಬೇಡ್ಕರ್ ಸಮ್ಮಾನ್ ವಿದ್ಯಾರ್ಥಿವೇತನ ಯೋಜನೆ ಘೋಷಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವುದರ ನಡುವೆ ಕೇಜ್ರಿವಾಲ್ ಈ ಯೋಜನೆ ಘೋಷಿಸಿದ್ದಾರೆ.
ದಲಿತ ಐಕಾನ್ ಅನ್ನು "ಅವಮಾನಿಸಿ" ಅಮಿತ್ ಶಾ ನೀಡಿದ್ದ ಹೇಳಿಕೆಗೆ ಈ ವಿದ್ಯಾರ್ಥಿವೇತನವು ಪ್ರತಿಕ್ರಿಯೆಯಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಯೋಜನೆಯನ್ನು ಅನಾವರಣಗೊಳಿಸಿ ಮಾತನಾಡಿದ ಕೇಜ್ರಿವಾಲ್, ಫೆಬ್ರವರಿ 2025 ರ ಚುನಾವಣೆಯಲ್ಲಿ AAP ಗೆಲುವು ಸಾಧಿಸಿದರೆ, ದೆಹಲಿ ಸರ್ಕಾರವು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ದಲಿತ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲಾಗುವುದು ಎಂದು ಭರವಸೆ ನೀಡಿದರು.
ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಗಳು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ನಿಲ್ಲಿಸಬೇಕಾಗಿಲ್ಲ. ಅವರಿಗೆ ಅಂಬೇಡ್ಕರ್ ಸಮ್ಮಾನ್ ಸ್ಕಾಲರ್‌ಶಿಪ್ ಯೋಜನೆ ಅಡಿ ಧನಸಹಾಯ ಮಾಡಲಾಗುವುದು ಎಂದರು.
ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದ ಕೇಜ್ರಿವಾಲ್, ಶಾ ದಲಿತರ ಐಕಾನ್ ಅನ್ನು ಅಪಹಾಸ್ಯ ಮಾಡಿದ್ದಾರೆ. ಅಮಿತ್ ಶಾ ಹೇಳಿಕೆಯಿಂದ ಲಕ್ಷಾಂತರ ಅಂಬೇಡ್ಕರ್ ಅನುಯಾಯಿಗಳಿಗೆ ನೋವುಂಟು ಮಾಡಿದೆ ದೆಹಲಿ ಮಾಜಿ ಸಿಎಂ ವಾಗ್ದಾಳಿ ನಡೆಸಿದರು
Advertisement