ದೆಹಲಿ ಚುನಾವಣೆ: ಮಹಿಳೆಯರು, ಹಿರಿಯ ನಾಗರಿಕರಿಗೆ ಅರವಿಂದ ಕೇಜ್ರಿವಾಲ್ ಸಿಹಿ ಸುದ್ದಿ

ದೆಹಲಿಯ ಮಹಿಳೆಯರಿಗೆ ಮಾಸಿಕ 1,000 ರೂ.ಗಳ ನೆರವು ನೀಡುವ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್
ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್
Updated on: 

ನವದೆಹಲಿ: ನಗರದ ಮಹಿಳೆಯರಿಗೆ ಮಾಸಿಕ 1,000 ರೂ.ಗಳ ನೆರವು ನೀಡುವ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಪ್ರಕ್ರಿಯೆ ನಾಳೆಯಿಂದ ಪ್ರಾರಂಭವಾಗಲಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.

ತನ್ನ 2024-25 ರ ಬಜೆಟ್‌ನಲ್ಲಿ, ದೆಹಲಿ ಸರ್ಕಾರವು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಮಹಿಳೆಯರಿಗೆ ತಿಂಗಳಿಗೆ 1,000 ರೂಪಾಯಿಗಳನ್ನು ಒದಗಿಸುವ ಈ ಯೋಜನೆಯನ್ನು ಘೋಷಿಸಿತ್ತು. ಮುಂದಿನ ವರ್ಷ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು 2,100 ರೂ.ಗೆ ಏರಿಸಲಾಗುವುದು ಎಂದು ಕೇಜ್ರಿವಾಲ್ ಇತ್ತೀಚೆಗೆ ಘೋಷಿಸಿದ್ದರು.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, 'ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯ ನೋಂದಣಿ ಪ್ರಕ್ರಿಯೆ ನಾಳೆ ಪ್ರಾರಂಭವಾಗಲಿದೆ. ಮಹಿಳೆಯರು ನೋಂದಣಿಗಾಗಿ ಎಲ್ಲಿಯೂ ಹೋಗಬೇಕಾಗಿಲ್ಲ; ನಮ್ಮ ಸ್ವಯಂಸೇವಕರು ನಿಮ್ಮ ಮನೆಗೆ ಬಂದು ನೋಂದಣಿಯನ್ನು ಪೂರ್ಣಗೊಳಿಸುತ್ತಾರೆ. ಫಲಾನುಭವಿಗಳು ತಮ್ಮ ಮತದಾರರ ಗುರುತಿನ ಚೀಟಿಯನ್ನು ತೋರಿಸಬೇಕಾಗುತ್ತದೆ ಮತ್ತು ದೆಹಲಿಯಲ್ಲಿರುವ ಎಲ್ಲ ಅರ್ಹ ಮಹಿಳಾ ಮತದಾರರು ಈ ಪ್ರಯೋಜನವನ್ನು ಪಡೆಯುತ್ತಾರೆ' ಎಂದು ತಿಳಿಸಿದರು.

ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್
ದೆಹಲಿ ಚುನಾವಣೆ: ಮತದಾನದ ಅಂತಿಮ ಅಂಕಿ-ಅಂಶ ಪ್ರಕಟ ವಿಳಂಬಕ್ಕೆ ಕೇಜ್ರಿ ಅಸಮಾಧಾನ: ಆಯೋಗಕ್ಕೆ ಪ್ರಶ್ನೆ 

ಸಂಜೀವಿನಿ ಯೋಜನೆಗೂ ನಾಳೆ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಲಿದ್ದು, AAP ಸ್ವಯಂಸೇವಕರು ಮನೆಬಾಗಿಲಿಗೆ ಬಂದು ನೋಂದಾಯಿಸಿಕೊಳ್ಳುತ್ತಾರೆ ಎಂದರು.

ದೆಹಲಿಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಮರಳಿದ ನಂತರ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ ನೀಡಲು ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಎಎಪಿ ಮುಖ್ಯಸ್ಥರು ಈ ಹಿಂದೆ ಘೋಷಿಸಿದ್ದರು.

ಕಳೆದ ಚುನಾವಣೆಯಲ್ಲಿ 70 ರಲ್ಲಿ 62 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೇರಿದ್ದ ಎಎಪಿ ಮುಂಬರುವ ದೆಹಲಿ ಚುನಾವಣೆಯಲ್ಲೂ ಗೆಲುವು ಸಾಧಿಸಿ ಸತತ ಮೂರನೇ ಅವಧಿಗೆ ಗದ್ದುಗೆ ಏರುವ ತವಕದಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com