'ಚುನಾವಣಾ ನಿಯಮವನ್ನು ತಿರುಚುತ್ತಿರುವ' ಮೋದಿ ಸರ್ಕಾರ ಆಯೋಗದ ಸಮಗ್ರತೆಯನ್ನು ಕುಗ್ಗಿಸುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಭಾರತೀಯ ಚುನಾವಣಾ ಆಯೋಗದ ಸಮಗ್ರತೆಯನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದಿದ್ದಾರೆ. ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ.
Mallikarjuna Kharge
ಮಲ್ಲಿಕಾರ್ಜುನ ಖರ್ಗೆ
Updated on

ನವದೆಹಲಿ: ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಗಟ್ಟಲು ಚುನಾವಣಾ ನಿಯಮವನ್ನು ಸರ್ಕಾರ ತಿರುಚಿದೆ ಎಂದು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆಯನ್ನು ನಾಶಪಡಿಸುವ ಮೋದಿ ಸರಕಾರದ ವ್ಯವಸ್ಥಿತ ಪಿತೂರಿಯ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ ಚುನಾವಣಾ ಆಯೋಗದ ಸಮಗ್ರತೆಯನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದಿದ್ದಾರೆ. ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಾವಳಿಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳ ಸಾರ್ವಜನಿಕ ತಪಾಸಣೆಯನ್ನು ತಡೆಯಲು ಸರ್ಕಾರವು ಚುನಾವಣಾ ನಿಯಮವನ್ನು ತಿರುಚಿದೆ.

Mallikarjuna Kharge
ಡಾ. ಅಂಬೇಡ್ಕರ್ ಗೆ ಅವಮಾನ: ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನೊಟೀಸ್ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ

ಭಾರತೀಯ ಚುನಾವಣಾ ಆಯೋಗದ (ECI) ಶಿಫಾರಸಿನ ಆಧಾರದ ಮೇಲೆ ಕೇಂದ್ರ ಕಾನೂನು ಸಚಿವಾಲಯವು ಶುಕ್ರವಾರ ಚುನಾವಣಾ ನಿಯಮಗಳ 1961 ರ ನಿಯಮ 93(2)(ಎ) ನ್ನು ತಿದ್ದುಪಡಿ ಮಾಡಿದೆ,

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, "ಮೋದಿ ಸರ್ಕಾರದ ಚುನಾವಣಾ ನಿಯಮಗಳ ತಿದ್ದುಪಡಿಯು ಭಾರತದ ಚುನಾವಣಾ ಆಯೋಗದ ಸಾಂಸ್ಥಿಕ ಸಮಗ್ರತೆಯನ್ನು ನಾಶಮಾಡುವ ವ್ಯವಸ್ಥಿತ ಪಿತೂರಿಯ ಮತ್ತೊಂದು ಆಕ್ರಮಣವಾಗಿದೆ ಎಂದು ಹೇಳಿದ್ದಾರೆ.

ಈ ಹಿಂದೆ, ಅವರು ಚುನಾವಣಾ ಆಯುಕ್ತರನ್ನು ನೇಮಿಸುವ ಆಯ್ಕೆ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ತೆಗೆದುಹಾಕಿದ್ದರು. ಈಗ ಅವರು ಹೈಕೋರ್ಟ್ ಆದೇಶದ ನಂತರವೂ ಚುನಾವಣಾ ಮಾಹಿತಿಗೆ ಕಲ್ಲು ಹಾಕಲು ನೋಡುತ್ತಿದ್ದಾರೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಮತದಾರರ ಅಳಿಸುವಿಕೆ ಮತ್ತು ಇವಿಎಂಗಳಲ್ಲಿ ಪಾರದರ್ಶಕತೆಯ ಕೊರತೆಯಂತಹ ನಿರ್ದಿಷ್ಟ ಚುನಾವಣಾ ಅಕ್ರಮಗಳ ಬಗ್ಗೆ ಕಾಂಗ್ರೆಸ್ ಪಕ್ಷವು ಇಸಿಐಗೆ ಪತ್ರ ಬರೆದಾಗಲೆಲ್ಲಾ, ಇಸಿಐ ಅರೆ-ನ್ಯಾಯಾಂಗ ಸಂಸ್ಥೆಯಾಗಿದ್ದರೂ ಸ್ವತಂತ್ರವಾಗಿ ವರ್ತಿಸುತ್ತಿಲ್ಲ ಎಂಬುದನ್ನು ಇದು ಮತ್ತೊಮ್ಮೆ ಸಾಬೀತುಪಡಿಸುತ್ತದೆ ಎಂದು ಹೇಳಿದರು.

ಲೋಕಸಭೆ ಸಂಸದ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್, ಚುನಾವಣಾ ಸಮಿತಿಯು ತನ್ನ ಈವರೆಗಿನ ವ್ಯವಹಾರಗಳಲ್ಲಿ ಅಪಾರದರ್ಶಕತೆ ಮತ್ತು ಸರ್ಕಾರದ ಪರ ಧೋರಣೆಯನ್ನು ಆರಿಸಿಕೊಂಡಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com