ಮುಂಬೈ ನಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ: BMC ಹೊಸ ಮಾರ್ಗಸೂಚಿ ಬಿಡುಗಡೆ
ಮುಂಬೈ: ಮುಂಬೈನ ನಾಗರಿಕ ಸಂಸ್ಥೆ ವಾಯು ಮಾಲಿನ್ಯವನ್ನು, ವಿಶೇಷವಾಗಿ ನಿರ್ಮಾಣ ಸಂಬಂಧಿತ ಮತ್ತು ರಸ್ತೆ ಧೂಳಿನ ಕಾರಣದಿಂದ ಉಂಟಾಗುವ ಮಾಲಿನ್ಯ ನಿಗ್ರಹಿಸಲು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಪ್ರಕಟಣೆಯಲ್ಲಿ, ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತನ್ನ ಘನತ್ಯಾಜ್ಯ ಇಲಾಖೆ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಿದೆ, ಇದು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.
ಹೊಸ ಕ್ರಮಗಳಲ್ಲಿ ಅಡುಗೆಗೆ ಇಂಧನವಾಗಿ ಮರ ಅಥವಾ ಅಂತಹುದೇ ವಸ್ತುಗಳನ್ನು ಬಳಸುವುದನ್ನು ನಿಷೇಧಿಸುವುದು ಮತ್ತು ನಿರ್ಮಾಣ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
" ನಿಷೇಧಿತ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಿತ ಇಲಾಖೆಗೆ ವಿಜಿಲೆನ್ಸ್ ತಂಡಗಳನ್ನು ನೇಮಿಸಲು ಮತ್ತು ಸ್ವಚ್ಛತಾ ಮಾರ್ಷಲ್ಗಳನ್ನು ನೇಮಕ ಮಾಡಲು ಸೂಚಿಸಲಾಗಿದ್ದು ಈ ಮೂಲಕ ಘನತ್ಯಾಜ್ಯ ನಿರ್ವಹಣಾ ಇಲಾಖೆಯು ರಸ್ತೆಗಳ ಉದ್ದಕ್ಕೂ ನಿರ್ಮಾಣದಿಂದ ಉಂಟಾಗುವ ಧೂಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲಿದೆ" ಎಂದು ಪ್ರಕಟಣೆ ತಿಳಿಸಿದೆ.
ಈ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಮತ್ತು ತ್ವರಿತ ಕ್ರಮ ಕೈಗೊಳ್ಳಲು ಎಲ್ಲಾ ಸಹಾಯಕ ಎಂಜಿನಿಯರ್‌ಗಳು ಮತ್ತು ಉಪ ಮುಖ್ಯ ಮೇಲ್ವಿಚಾರಕರಿಗೆ ಇಲಾಖೆ ಸೂಚಿಸಿದೆ. ವಾಯುಮಾಲಿನ್ಯಕ್ಕೆ ಕಾರಣವಾಗುವ ಪ್ರಮುಖ ಮತ್ತು ಸಣ್ಣ ಅಂಶಗಳೆರಡನ್ನೂ ಪರಿಹರಿಸಲು ಸಮಗ್ರ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ ಎಂದು ಅದು ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ