ಶೇಖ್ ಹಸೀನಾ ಹಸ್ತಾಂತರ ಕೋರಿ ಬಾಂಗ್ಲಾದೇಶ ಪತ್ರ: ಪ್ರತಿಕ್ರಿಯಿಸಲು ಭಾರತ ನಕಾರ

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬಾಂಗ್ಲಾದೇಶದಿಂದ ಟಿಪ್ಪಣಿ ಸ್ವೀಕರಿಸಿರುವುದನ್ನು ದೃಢಪಡಿಸಿದೆ. ಆದರೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.
Sheikh Hasina
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾonline desk
Updated on: 

ನವದೆಹಲಿ: ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ಹಸ್ತಾಂತರಿಸುವಂತೆ ಕೋರಿ ಭಾರತಕ್ಕೆ ರಾಜತಾಂತ್ರಿಕ ಪತ್ರ ಬರೆದಿದ್ದು, ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಲು ಭಾರತ ನಿರಾಕರಿಸಿದೆ.

ಕಳೆದ ಆಗಸ್ಟ್‌ನಿಂದ ಬಾಂಗ್ಲಾದೇಶ ತೊರೆದು ಭಾರತದಲ್ಲಿ ನೆಲೆಸಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಬಾಂಗ್ಲಾದೇಶ ಭಾರತಕ್ಕೆ ಔಪಚಾರಿಕವಾಗಿ ಮನವಿ ಮಾಡಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಬಾಂಗ್ಲಾದೇಶದಿಂದ ಟಿಪ್ಪಣಿ ಸ್ವೀಕರಿಸಿರುವುದನ್ನು ದೃಢಪಡಿಸಿದೆ. ಆದರೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.

Sheikh Hasina
ಶೇಖ್ ಹಸೀನಾರನ್ನು ಢಾಕಾಗೆ ವಾಪಸ್ ಕಳುಹಿಸಿ; ಭಾರತಕ್ಕೆ ಬಾಂಗ್ಲಾದೇಶ ಸರ್ಕಾರ ಪತ್ರ

ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ಅವರು ಈ ಕ್ರಮವನ್ನು ದೃಢಪಡಿಸಿದ್ದಾರೆ. ನ್ಯಾಯಾಂಗ ಪ್ರಕ್ರಿಯೆಗಳಿಗಾಗಿ ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರಲಾಗಿದೆ ಎಂದು ಅವರು ಹೇಳಿದ್ದಾರೆ.

ಢಾಕಾ ಮೂಲದ ಅಂತಾರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಶೇಖ್ ಹಸೀನಾ ಮತ್ತು ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು, ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ ಬಂಧನ ವಾರಂಟ್‌ಗಳನ್ನು ಹೊರಡಿಸಿದೆ.

'ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿ ಶೇಖ್ ಹಸೀನಾ ಅವರು ಢಾಕಾಗೆ ಮರಳಬೇಕು ಎಂದು ಬಾಂಗ್ಲಾದೇಶವು ಬಯಸುತ್ತದೆ. ಹೀಗಾಗಿ, ನಾವು ಭಾರತ ಸರ್ಕಾರಕ್ಕೆ ಟಿಪ್ಪಣಿ(ರಾಜತಾಂತ್ರಿಕ ಸಂದೇಶ) ಕಳುಹಿಸಿದ್ದೇವೆ' ಎಂದು ತೌಹಿದ್ ಹುಸೇನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com